Recent Posts

Sunday, January 19, 2025
ಸುದ್ದಿ

ಡೆತ್ ನೋಟ್ ಬರೆದಿಟ್ಟು ಬಿಲ್ಡರ್ ಆತ್ಮಹತ್ಯೆ – ಕಹಳೆ ನ್ಯೂಸ್

ಉಡುಪಿ: ಖಾಸಗಿ ಶಿಪ್ ನ‌ ಮಾಜಿ ಉದ್ಯೋಗಿ, ಬಿಲ್ಡರ್ ಆಗಿದ್ದವರೊಬ್ಬರು ಹೊಟ್ಟೆಗೆ ಚಾಕು ಚುಚ್ಚಿಕೊಂಡು ತುಂಬಾ ಭೀಕರವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದಲ್ಲಿ ನಡೆದಿದೆ.

ಒಲಿವೆರಾ ಲೂಯಿಸ್ (68), ಹೊಟ್ಟೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ತಡರಾತ್ರಿ ಮಣಿಪಾಲದ ಸಂಬಂಧಿಕರ ಮನೆಗೆ ಆಗಮಿಸಿದ್ದು, ಇಂದು ಮುಂಜಾನೆ ಮನೆಯ ಸಮೀಪ ತಮ್ಮ ಫೋರ್ಡ್ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಗೆ ಡೆತ್ ನೋಟ್ ಬರೆದಿರುವ ಒಲಿವೆರಾ ಲೂಯಿಸ್, ನನ್ನ ಸಾವಿಗೆ ನಾನೇ ಕಾರಣ. ಮಕ್ಕಳನ್ನು‌ ಚೆನ್ನಾಗಿ ನೋಡಿಕೋ ಎಂದು ಬರೆದಿದ್ದಾರೆ. ಲೂಯಿಸ್ ಅವರು ಲಕ್ಷ್ಮೀಂದ್ರನಗರ ನಿವಾಸಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಕೆಲ ವರ್ಷಗಳಿಂದ ಬಿಲ್ಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ‌ ತೀವ್ರ ಖಿನ್ನತೆಗೂ ಒಳಗಾಗಿದ್ದರು. ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರ್ಗಿ, ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು