ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು,ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಎ.28ರಂದು ಬೆಳಿಗ್ಗೆ ನಡೆದಿದೆ.
ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ (35) ಮೃತಪಟ್ಟ ಯುವಕನಾಗಿದ್ದು,ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಅಕಾಶ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು,
ಬಿಸಿರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಅತೀವೇಗದ ಹಾಗೂ ಅಜಾಕರಕತೆಯಿಂದ ಚಾಲನೆ ಮಾಡಿಕೊಂಡು ಬಂದ ರಿಟ್ಜ್ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ .
ಅಪಘಾತದಿಂದ ಗಾಯಗೊಂಡಿದ್ದ ಸಂದೀಪ್ ಲೋಬೋ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅಸುನೀಗಿದ್ದು,ಅಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುಂಜಾಲಕಟ್ಟೆ ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
You Might Also Like
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಫುಡ್ ಫೆಸ್ಟ್-ಕಹಳೆ ನ್ಯೂಸ್
ಪುತ್ತೂರು; ದೂರದೃಷ್ಟಿ, ಕಠಿಣ ಪರಿಶ್ರಮಗಳೇ ಯಶಸ್ಸಿನ ಮೆಟ್ಟಿಲು. ಅವಕಾಶಗಳು ಸಿಕ್ಕಾಗಲೆಲ್ಲಾ ನಿಮ್ಮ ಗುರಿಯನ್ನು ತಲುಪಲು ಅವುಗಳನ್ನು ಬಳಸಿಕೊಳ್ಳಿ’ ಎಂದು ಮಂಗಳೂರಿನ ವಾಣಿಜ್ಯೋದ್ಯಮಿ ಶ್ರೀ ವಿಜಿತ್ ಶೆಟ್ಟಿ ಅವರು...
ಸುಬ್ರಹ್ಮಣ್ಯದ ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲ್ ವಿಕ್ರಂ ಗೌಡ ಮತ್ತು ತಂಡ-ಕಹಳೆ ನ್ಯೂಸ್
ಉಡುಪಿ: ಕಾಡಿನಲ್ಲಿಯೇ ಸುತ್ತಾಡುವ ನಕ್ಸಲರು ಕೆಲವು ಸಮಯದ ಹಿಂದೆ ರೈಲಿನ ಮೂಲಕ ಪ್ರಯಾಣಿಸಿದ್ದರು ಎಂಬ ಮಾಹಿತಿ ಈಗ ಹೊರಗೆ ಬಿದ್ದಿದೆ. ಎನ್ಕೌಂಟರ್ಗೆ ಬಲಿಯಾದ ನಕ್ಸಲ್ ವಿಕ್ರಂ ಗೌಡ ಮತ್ತು ತಂಡ ಸುಬ್ರಹ್ಮಣ್ಯದಿಂದ ಮುರ್ಡೇಶ್ವರ ವರೆಗೆ ರೈಲಿನಲ್ಲಿ ಹೋಗಿ ಅನಂತರ ಕಾಡು ಹಾದಿ ಹಿಡಿದಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಲೋಕಸಭೆ ಚುನಾವಣೆ ಸನಿಹದಲ್ಲಿ ಎಲ್ಲೆಡೆ ಹೆಚ್ಚುವರಿ ಭದ್ರತೆ ಇದ್ದುದರಿಂದ ದಕ್ಷಿಣ ಕನ್ನಡ, ಕೊಡಗು ಗಡಿಭಾಗ ಕೂಜುಮಲೆ, ಕಡಮಕಲ್ಲು , ಸುಬ್ರಹ್ಮಣ್ಯ, ಬಿಳಿನೆಲೆ ಭಾಗದಲ್ಲಿ ಹೆಚ್ಚಿನ ದಿನಗಳನ್ನು ನಕ್ಸಲರು ಕಳೆದಿದ್ದರು. ಈ ವೇಳೆ ಇಲ್ಲಿನ ಅರಣ್ಯದಂಚಿನ ಮನೆಗಳಿಗೆ ಭೇಟಿ ನೀಡಿ ದಿನಸಿ ಹಾಗೂ ಇನ್ನಿತರ ಸಾಮಗ್ರಿಗಳನ್ನು ಕೊಂಡೊಯ್ದಿದ್ದರು. ಅಲ್ಲಿಂದ ಪಕ್ಕದ ಸುಬ್ರಹ್ಮಣ್ಯ ಕ್ರಾಸಿಂಗ್ ರೋಡ್(ನೆಟ್ಟಣ) ರೈಲು ನಿಲ್ದಾಣಕ್ಕೆ ಆಗಮಿಸಿ ರೈಲಿನ ಮೂಲಕ ಮುರ್ಡೇಶ್ವರ ಕಡೆಗೆ ಪ್ರಯಾಣಿಸಿದ್ದರು. ಮುರ್ಡೇಶ್ವರ ರೈಲು ನಿಲ್ದಾಣದಲ್ಲಿ ಇಳಿದು ಕಾಡು ಹತ್ತಿದ್ದ ಅವರು ಕೊಲ್ಲೂರು...
ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ‘ಜಾಗೃತಿ ಅರಿವು’ ಕಾರ್ಯಕ್ರಮ-ಕಹಳೆ ನ್ಯೂಸ್
ಸುಳ್ಯ; ಎನ್.ಎಂ.ಸಿ, ನ.28; ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಜಾಗೃತಿ ಅರಿವು ಕಾರ್ಯಕ್ರಮವು ನವೆಂಬರ್ 23 ಶನಿವಾರದಂದು ಕಾಲೇಜಿನ...
ತೀರ ಕಡು ಬಡತನದಲ್ಲಿದ್ದ ಆದಿದ್ರಾವಿಡ ಸಮುದಾಯದ ಜೀತು ನೇಲ್ಯಪಲ್ಕೆಯವರಿಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿAದ ಸಹಾಯಧನ ಹಸ್ತಾಂತರ-ಕಹಳೆ ನ್ಯೂಸ್
ಬಂಟ್ವಾಳ: ತೀರ ಕಡು ಬಡತನದಲ್ಲಿದ್ದ ಆದಿದ್ರಾವಿಡ ಸಮುದಾಯದ ಜೀತು ನೇಲ್ಯಪಲ್ಕೆ ಇವರು ಆಕಸ್ಮಿಕವಾಗಿ ಬೆಂಕಿಗೆ ಬಿದ್ದು ಮುಖ, ಕಿವಿ ಹಾಗೂ ದೇಹದ ಭಾಗ ಸುಟ್ಟು ಹೋಗಿದ್ದು, ಈ...