Tuesday, January 28, 2025
ಸುದ್ದಿ

ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಗಲಾಟೆ : ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ – ಕಹಳೆ ನ್ಯೂಸ್

ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ಕಾಲೇಜು ಫೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ನಿನ್ನೆ ರಾತ್ರಿ 9.30ರ ವೇಳೆ ಭಾಸ್ಕರ್‌ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿ ಭಾಸ್ಕರ್ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದ.

ಘಟನೆ ಸಂಬAಧ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.