Friday, January 24, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ಯುವ ಮುಖಂಡ ದಿ. ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ – ಕಹಳೆ ನ್ಯೂಸ್

ಪುತ್ತೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ದಿ. ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಅವರು
ಕೊಡಿಯಾಲಬೈಲಿನ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿ, ದಿ. ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನ ಅವರಿಗೆ ಸಾಂತ್ವನ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಈಗಾಗಲೇ
ಪಿ.ಎಫ್.ಐ.ಯನ್ನು ನಿಷೇಧಿಸಿದ್ದು, ಪ್ರವೀಣ್ ಕುಟುಂಬದೊಂದಿಗೆ
ಬಿಜೆಪಿ ಸದಾ ಇರಲಿದೆ ಎಂದರು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಭ್ಯರ್ಥಿ ಭಾಗೀರಥಿ ಮುರುಳ್ಯ ಸೇರಿದಂತೆ ಸುಳ್ಯದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.