Friday, January 24, 2025
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

20 ಸಾವಿರ ಬಿಜೆಪಿ ಕಾರ್ಯಕರ್ತರಿಂದ ಬೆಳ್ತಂಗಡಿ ತಾಲೂಕಿನಾದ್ಯಂತ 50 ಸಾವಿರಕ್ಕೂ ಅಧಿಕ ಮನೆ ಭೇಟಿ ; ಹರೀಶ್ ಪೂಂಜ ಭರ್ಜರಿ ಪ್ರಚಾರ – ಮಹಾಸಂಪರ್ಕ ಅಭಿಯಾನ ಮಹಾಯಶಸ್ವಿ – ಕಹಳೆ ನ್ಯೂಸ್

ಬೆಳ್ತಂಗಡಿ: ಮಹಾ ಸಂಪರ್ಕ ಅಭಿಯಾನ, 20 ಸಾವಿರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರಿಂದ ಮನೆ ಮನೆ ಭೇಟಿ ನಡೆದಿದೆ.‌

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಮಹಾ ಸಂಪರ್ಕ ಅಭಿಯಾನ ಬೆಳ್ತಂಗಡಿ ಮಂಡಲದಲ್ಲಿ ಇಂದು ಯಶಸ್ವಿಯಾಗಿ ಸಂಪನ್ನಗೊಂಡಿದೆ.

ಬೆಳ್ತಂಗಡಿ ಮಂಡಲದ 81 ಗ್ರಾಮಗಳ 241 ಬೂತ್‌ಗಳಲ್ಲಿ ಮಹಾ ಸಂಪರ್ಕ ಅಭಿಯಾನ ನಡೆಯಿತು. ಒಂದೇ ದಿನ 20 ಸಾವಿರಕ್ಕೂ ಅಧಿಕ ಕಾರ್ಯಕರ್ತರು 50 ಸಾವಿರಕ್ಕೂ ಅಧಿಕ ಮನೆಗಳಿಗೆ ಭೇಟಿ ನೀಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರ ಪರವಾಗಿ ಮತಯಾಚನೆ ನಡೆಸಿದರು. ಮಹಾ ಸಂಪರ್ಕ ಅಭಿಯಾನವು ಕಾರ್ಯಕರ್ತರಲ್ಲಿ ಹೊಸ ಉಲ್ಲಾಸ ಸೃಷ್ಟಿಸಿದೆ.

ಮಹಾ ಸಂಪರ್ಕ ಅಭಿಯಾನದಲ್ಲಿ ಶಾಸಕ ಹರೀಶ್‌ ಪೂಂಜ, ಮಂಡಲ ಅಧ್ಯಕ್ಷ ಜಯಂತ್‌ ಕೋಟ್ಯಾನ್‌, ಪಕ್ಷದ ಪದಾಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗಿಯಾದರು.