ರಾಯಚೂರು: ಅನಾರೋಗ್ಯದಿಂದ ಮೃತಪಟ್ಟ ಪತಿಯ ಶವವನ್ನು ಆಂಬುಲೆನ್ಸ್ನಲ್ಲಿ ಮನೆಗೆ ಸಾಗಿಸುತ್ತಿದ್ದ ಪತ್ನಿ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಮಸ್ಕಿ ತಾಲೂಕಿನ ಸಂತೆ ಕೆಲೂರು ಬಳಿ ನಡೆದಿದೆ.
ಗಂಗಪ್ಪ ಎಂಬುವರು ಅನಾರೋಗ್ಯದಿಂದ ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಆಸ್ಪತ್ರೆಯಲ್ಲೇ ಮೃತಪಟ್ಟ ಅವರ ಶವವನ್ನು ಆಂಬುಲೆನ್ಸ್ನಲ್ಲಿ ಸ್ವಗ್ರಾಮ ಸುರಪುರಕ್ಕೆ ತೆಗೆದುಕೊಂಡು ಬರಲಾಗುತ್ತಿತ್ತು. ಮಸ್ಕಿ ಬಳಿ ಆಂಬುಲೆನ್ಸ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಅದರಲ್ಲಿದ್ದ ಗಂಗಪ್ಪ ಪತ್ನಿ ಶ್ರೀದೇವಿ (30) ಸೇರಿ ನಾಲ್ವರು ತೀವ್ರ ಗಾಯಗೊಂಡಿದ್ದರು.
ಶ್ರೀದೇವಿಯವರನ್ನು ಮಸ್ಕಿ ಆಸ್ಪತ್ರೆಗೆ ಸೇರಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.