Friday, January 24, 2025
ದಕ್ಷಿಣ ಕನ್ನಡರಾಜಕೀಯಸುದ್ದಿ

ಎಡಪದವು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ಡಾ. ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಮಂಗಳೂರು : ಎಡಪದವು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮೂಡು ಪೆರಾರ ಮತ್ತು ಪಡುಪೆರಾರ ಶಕ್ತಿ ಕೇಂದ್ರ ವ್ಯಾಪ್ತಿಯ ಸಾರ್ವಜನಿಕ ಸಭೆಯಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಭಾಗವಹಿಸಿ ಈ ಭಾಗದಲ್ಲಿ ಈಗಾಗಲೇ ಆಗಿರುವ ಮತ್ತು ಆಗಲಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಎಡಪದವು ಮಹಾಶಕ್ತಿ ಕೇಂದ್ರದ ಚುನಾವಣಾ ಉಸ್ತುವಾರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಜನಾರ್ದನ ಗೌಡ ಅವರು ಶಾಸಕರ ಅಭಿವೃದ್ಧಿ ಕಾರ್ಯದ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ಪಡುಪೆರಾರ ಪಂಚಾಯತ್ ಅಧ್ಯಕ್ಷೆ ಅಮಿತಾ ಮೋಹನ್ ಶೆಟ್ಟಿ, ಎಡಪದವು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಸಾದ್ ಎಡಪದವು, ಶಕ್ತಿ ಕೇಂದ್ರದ ಪ್ರಮುಖರಾದ ಶೇಖರ್, ಗುರುಪ್ರಸಾದ್, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಚುನಾಯಿತ ಜನ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು ,ಅಜಿತ್ ಕಾರ್ಯಕ್ರಮ ನಿರೂಪಿಸಿದರು.