Friday, January 24, 2025
ಸುದ್ದಿ

ಮತಗಟ್ಟೆ ಅಧಿಕಾರಿಗಳಿಗೆ ಎರಡನೇ ಹಂತದ ತರಬೇತಿ – ಕಹಳೆ ನ್ಯೂಸ್

ಮತದಾನದ ಕರ್ತವ್ಯ ನಿರ್ವಹಣೆ ಬಗ್ಗೆ ೨೦೫ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 1176 ಮತಗಟ್ಟೆ ಅಧಿಕಾರಿಗಳಿಗೆ ಎರಡನೇ ಹಂತದ ತರಬೇತಿಯು ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

25 ಜನ ಸೆಕ್ಟರ್ ಅಧಿಕಾರಿಗಳು ತರಬೇತಿ ನೀಡಿದರು. ಮಾಸ್ಟರ್ ಟ್ರೈನರ್ ಗಳಾದ ಅಬ್ದುಲ್ ರಝಾಕ್, ಉದಯ ಕುಮಾರ್ ಮತ್ತು ಸನತ್ ರಾಮ್ ಮಾರ್ಗದರ್ಶನ ಮಾಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಚುನಾವಣಾ ವೀಕ್ಷರಾದ ದೀಪಾಂಕರ್ ಸಿನ್ಹಾ, ಜಿಲ್ಲಾ ಮಟ್ಟದ ತರಬೇತಿ ನೋಡಲ್ ಅಧಿಕಾರಿಯವರು ಮತ್ತು ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ನಿರ್ದೇಶಕರಾದ ನಿರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚುನಾವಣಾಧಿಕಾರಿ ಅಬಿದ್ ಗದ್ಯಾಲ್, ಸಹಾಯಕ ಚುನಾವಣಾಧಿಕಾರಿ ಎಸ್.ಬಿ.ಕೂಡಲಗಿ, ಗ್ರೇಡ್ ೨ ತಹಶೀಲ್ದಾರ್ ದಯಾನಂದ ಕೆ.ಎಸ್., ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಮಧು ಎಂ., ಚುನಾವಣಾ ಉಪತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಉಪತಹಶೀಲ್ದಾರ್ ನರೇಂದ್ರನಾಥ್ ಮಿತ್ತೂರು, ರಾಜೇಶ್ ನಾಯ್ಕ್ ಎನ್.ಎಮ್,ವಿಜಯ ವಿಕ್ರಮ್
ಚುನಾವಣಾ ಕರ್ತವ್ಯ ನಿರತ ಕಂದಾಯ ಇಲಾಖೆ, ಸರ್ವೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಅಧಿಕಾರಿಗಳಿಗೆ ಪರೀಕ್ಷೆಯನ್ನು ನಡೆಸಲಾಯಿತು.