Friday, January 24, 2025
ರಾಜ್ಯವಾಣಿಜ್ಯಸುದ್ದಿ

ಬೆಲೆ ಏರಿಕೆಯಿಂದ ತತ್ತರಿಸಿರುವ ದೇಶದ ಜನತೆಗೆ ಕೊಂಚ ನಿರಾಳತೆ : ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ – ಕಹಳೆನ್ಯೂಸ್

ನವದೆಹಲಿ: ಪೆಟ್ರೋಲಿಯಂ ಮತ್ತು ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪರಿಷ್ಕರಿಸಿವೆ. 19 ಕೆಜಿ ತೂಕದ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ₹171.5 ಕಡಿತಗೊಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದರ ಪರಿಣಾಮ, ದೆಹಲಿಯಲ್ಲಿ 19 ಕೆ.ಜಿ ಸಿಲಿಂಡರ್‌ನ ಬೆಲೆ ಈಗ 1,856.50 ರೂಪಾಯಿ ಇದೆ. ಕಳೆದ ತಿಂಗಳು ಕೂಡ 91.50 ರೂ. ಇಳಿಕೆ ಮಾಡಲಾಗಿತ್ತು. ತೈಲ ಕಂಪನಿಗಳು ಈ ವರ್ಷ ಮಾರ್ಚ್‌ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 350.50 ರೂ ಮತ್ತು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 50 ರೂ. ಹೆಚ್ಚಿಸಿದ್ದವು. ಜನವರಿ 1 ರಂದು ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಪ್ರತಿ ಯೂನಿಟ್‌ಗೆ 25 ರೂ. ಏರಿಕೆ ಮಾಡಲಾಗಿತ್ತು.

ಕಳೆದ ವರ್ಷ ಸೆ.1 ರಂದು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು 91.50 ರೂ. ಕಡಿತಗೊಳಿಸಲಾಯಿತು. ಆಗಸ್ಟ್ 1, 2022 ರಂದು ಸಹ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 36 ರೂ.ಗಳಷ್ಟು ಕಡಿಮೆ ಮಾಡಲಾಗಿತ್ತು. ಅದಕ್ಕೂ ಮೊದಲು ಜುಲೈ 6 ರಂದು 8.5 ರೂ ಕಡಿತಗೊಳಿಸಲಾಗಿತ್ತು.

ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಈಗ ₹1856.50 ಆಗಲಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಲೆ ಇಳಿಕೆಯಿಂದ ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ 1,808.50 ರೂ ಆಗಿದ್ದರೆ, ಕೋಲ್ಕತ್ತಾದಲ್ಲಿ 1,960.50 ರೂ. ಹಾಗೂ ಚೆನ್ನೈನಲ್ಲಿ 2,021.50 ರೂ.ಗೆ ಸಿಲಿಂಡರ್ ಮಾರಾಟವಾಗಲಿದೆ. ನೂತನ ದರಗಳು ಇಂದಿನಿಂದಲೇ ಜಾರಿಗೆ ಬರಲಿದೆ.

171.50 ರೂ. ಇಳಿಕೆ: ಪರಿಷ್ಕರಣೆಗೆ ಮೊದಲು, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಾರ ದೆಹಲಿಯಲ್ಲಿ 19 ಕೆ.ಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಕ್ರಮವಾಗಿ 2,028 ರೂ., ಕೋಲ್ಕತ್ತಾದಲ್ಲಿ 2,132 ರೂ., ಮುಂಬೈನಲ್ಲಿ 1,980 ರೂ. ಮತ್ತು ಚೆನ್ನೈನಲ್ಲಿ 2,192.50 ರೂ.ಗೆ ಮಾರಾಟವಾಗುತ್ತಿತ್ತು. ಪೆಟ್ರೋಲಿಯಂ ಮತ್ತು ತೈಲ ಕಂಪನಿಗಳು ಏ.1 ರಂದು ಸಹ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 91.50 ರೂ. ಕಡಿತಗೊಳಿಸಿತ್ತು. ಈಗ ಮತ್ತೆ 171.50 ರೂ. ಇಳಿಕೆ ಮಾಡಲಾಗಿದೆ.

ಭಾರತದಲ್ಲಿ ಎಲ್​ಪಿಜಿ ಬೆಲೆಗಳನ್ನು ದೇಶೀಯ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಿರ್ಧರಿಸುತ್ತವೆ. ಪ್ರತಿ ತಿಂಗಳು ಬೆಲೆಯಲ್ಲಿ ಪರಿಷ್ಕರಣೆಯಾಗುತ್ತದೆ. ಸ್ಥಳೀಯ ತೆರಿಗೆಗಳಿಂದಾಗಿ ದೇಶೀಯ ಅಡುಗೆ ಅನಿಲ ವೆಚ್ಚಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಪ್ರತಿ ಕುಟುಂಬ ವರ್ಷಕ್ಕೆ ಸಬ್ಸಿಡಿ ದರದಲ್ಲಿ 12 ಸಿಲಿಂಡರ್‌ಗಳಿಗೆ ಅರ್ಹವಾಗಿರುತ್ತದೆ.