Friday, January 24, 2025
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್‌ ಬಂದರೆ ಭಯೋತ್ಪಾದನೆ ‘ಗ್ಯಾರಂಟಿ’ : ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ ಟೀಕೆ – ಕಹಳೆ ನ್ಯೂಸ್

ಮಂಗಳೂರು: ‘ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ, ಬಾಂಬ್ ಸ್ಫೋಟ, ಓಲೈಕೆ, ಒಡೆದು ಆಳುವ ನೀತಿ, ಭ್ರಷ್ಟಾಚಾರ ಮತ್ತು ಹಗರಣಗಳು ಗ್ಯಾರಂಟಿ’ ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ ಟೀಕಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ವಿಭಾಗೀಯ ಚುನಾವಣಾ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕಾಂಗ್ರೆಸ್ ಅಧಿಕಾರದಲ್ಲಿರುವ ಕೆಲವೇ ಕೆಲವು ರಾಜ್ಯಗಳಲ್ಲಿ ಈಗಾಗಲೇ ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೆ ತರಲು ಸಾಧ್ಯವಾಗಲಿಲ್ಲ. ಹೀಗಾಗಿ ಕರ್ನಾಟಕದಲ್ಲಿ ಗ್ಯಾರಂಟಿ ಆಸೆ ತೋರಿಸಿ ಮತ ಕೇಳುತ್ತಿರುವ ಕಾಂಗ್ರೆಸ್ ಜನರ ಮೊಣಕೈಗೆ ಜೇನುತುಪ್ಪ ಸವರುತ್ತಿದೆ’ ಎಂದು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷದ ಹಾವು ಎಂದು ಕರೆದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಖಂಡನೀಯ ಎಂದು ಹೇಳಿದ ಗಣೇಶ್‌ ಕಾರ್ಣಿಕ್ ಸಮೀಕ್ಷೆಯೊಂದರ ಪ್ರಕಾರ ಮೋದಿ ಅವರನ್ನು ಅತಿ ಹೆಚ್ಚು ಪ್ರೀತಿಸುವ ರಾಜ್ಯ ಕರ್ನಾಟಕ ಎಂದು ಸಾಬೀತಾಗಿದೆ. ಅಂಥ ಪ್ರಧಾನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಖರ್ಗೆ ಅವರು ಕರ್ನಾಟಕದ 6.5 ಕೋಟಿ ಜನರಿಗೆ ಅವಮಾನ ಮಾಡಿದ್ದಾರೆ’ ಎಂದು ದೂರಿದರು.

ಪಕ್ಷದ ಜಿಲ್ಲಾ ವಕ್ತಾರ ಜಗದೀಶ ಶೇಣವ ಮಾತನಾಡಿ, ಶನಿವಾರ ಅಮಿತ್ ಶಾ ಅವರ ರೋಡ್ ಶೋ ಕೊಟ್ಟಾರ ಚೌಕಿಯಿಂದ ಬದಲಾಗಿ ನಗರದ ಕ್ಲಾಕ್ ಟವರ್‌ನಿಂದ ನವಭಾರತ್ ವೃತ್ತದವರೆಗೆ ನಡೆಯಲಿದೆ ಎಂದರು.

ವರುಣಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್‌ನವರು ಹಲ್ಲೆ ಮಾಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆದ ದ್ರೋಹ ಎಂದು ಅವರು ಹೇಳಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಹಾಗೂ ಮುಖಂಡ ರತನ್ ರಮೇಶ್ ಪೂಜಾರಿ ಇದ್ದರು.

ನಾಳೆ ಮನ್‌ ಕಿ ಬಾತ್‌

ಮೋದಿ ಅವರ ಮನ್‌ ಕಿ ಬಾತ್ ಕಾರ್ಯಕ್ರಮದ 100ನೇ ಆವೃತ್ತಿ ಇದೇ 30ರಂದು ಪ್ರಸಾರಗೊಳ್ಳಲಿದ್ದು ಅದನ್ನು ವೀಕ್ಷಿಸಲು ಬೂತ್ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.