Monday, November 25, 2024
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ; ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ – ಕಹಳೆ ನ್ಯೂಸ್

ನವದೆಹಲಿ, ಮೇ 02 :ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. “ಸರ್ವ ಜನಾಂಗದ ಶಾಂತಿಯ ತೋಟ” ಹೆಸರಿನಲ್ಲಿ ಪ್ರಣಾಳಿಕೆಯನ್ನು ಕಾಂಗ್ರೆಸ್ ಸಿದ್ದಪಡಿಸಿದ್ದು ಇದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆ ಹೈಲೈಟ್ಸ್ ಇಲ್ಲಿದೆ:

ಜಾಹೀರಾತು
ಜಾಹೀರಾತು
ಜಾಹೀರಾತು

ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​ , ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ. , ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು,ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ.,ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ, ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ, ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ, ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ, ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ, ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ, ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ ಹೀಗೆ ಹಲವು ಭರವಸೆಗಳನ್ನು ನೀಡಿದೆ.