Recent Posts

Monday, January 20, 2025
ಉಡುಪಿದಕ್ಷಿಣ ಕನ್ನಡಮೂಡಬಿದಿರೆರಾಜಕೀಯಸುದ್ದಿ

ಮೇ 3 ರಂದು ಮೋದಿ ಕಾರ್ಯಕ್ರಮಕ್ಕೆ 3 ಲಕ್ಷ ಜನರ ನಿರೀಕ್ಷೆ –ಕಹಳೆ ನ್ಯೂಸ್

ಉಡುಪಿ : ಮೇ. 3 ಬುಧವಾರದಂದು ಮೂಲ್ಕಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು ಮೂಲ್ಕಿಯಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಸುಮಾರು 3 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಧ್ಯಭಾಗದಲ್ಲಿರುವ ಮೂಲ್ಕಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೂಲಕ ಉಭಯ ಜಿಲ್ಲೆಗಳ ಕಾರ್ಯಕರ್ತರಲ್ಲಿ ಉತ್ಸಾಹ ಮತ್ತು ಹುರುಪು ತುಂಬುವ ಕೆಲಸ ಮಾಡಲಾಗುತ್ತದೆ.

ಕಾಪು ವಿಧಾನಸಭಾ ಕ್ಷೇತ್ರ,ಮಂಗಳೂರು ವಿಧಾನಸಭಾ ಕ್ಷೇತ್ರ ,ಮಂಗಳೂರು ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಸುಮಾರು 3 ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕರ್ತರು ಮತ್ತು ಜನರನ್ನು ಸಮಾವೇಶದಲ್ಲಿ ಸೇರಿಸಲಾಗುವುದು. ಈ ಮೂಲಕ ಉಭಯ ಜಿಲ್ಲೆಗಳ 13 ಕ್ಷೇತ್ರಗಳಲ್ಲಿ 13 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವುದು ಪಕ್ಷದ ಗುರಿ ಎಂದು ಅವರು ಮಾಹಿತಿ ನೀಡಿದರು.