ನಾಟಾ ಪರೀಕ್ಷೆಯಲ್ಲಿ ಎಕ್ಸ್ ಲೆಂಟ್ ವಿದ್ಯಾರ್ಥಿಗಳ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ – ಕಹಳೆ ನ್ಯೂಸ್
ಮೂಡುಬಿದಿರೆ : 2023ರ ಏಪ್ರಿಲ್ ತಿಂಗಳಿನಲ್ಲಿ ನಡೆದ ನಾಟಾ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಇದರಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ 3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯೊಂದಿಗೆ ಅರ್ಹತೆಯನ್ನು ಪಡೆದಿರುತ್ತಾರೆ.
ತೇಜಸ್ವಿನಿ ಎಲ್ ರೆಡ್ಡಿ, ಧ್ಯಾನ್ ಎಮ್ ಎ, ಅಮನ್ ಇರಾನಿ. ಇವರ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಮುಂದಿನ ವ್ಯಾಸಂಗಕ್ಕೆ ಅನುಕೂಲವಾಗುವಂತೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಯವರಾದ ಶ್ರೀಮತಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ, ಜೆಇಇ ಸಂಯೋಜಕರಾದ ರಾಮಮೂರ್ತಿ, ಶೈಲೇಶ್ ಶೆಟ್ಟಿ, ಡಾ ದಯಾನಂದ್ ಶುಭ ಹಾರೈಸಿರುತ್ತಾರೆ.