Monday, November 25, 2024
ರಾಜಕೀಯರಾಜ್ಯಸುದ್ದಿ

ಮುಸ್ಲಿಂ ಓಲೈಕೆಗಾಗಿ ಭಜರಂಗದಳ ನಿಷೇಧಿಸುತ್ತೇವೆಂಬ ದಾಷ್ಟ್ಯವೇ..? : ಕಾಂಗ್ರೇಸ್ ಪ್ರಣಾಳಿಕೆ ವಿರುದ್ಧ ಕಾರ್ಕಳ ಶಾಸಕ ಸುನೀಲ್ ಕುಮಾರ್ ಗರಂ.. –ಕಹಳೆ ನ್ಯೂಸ್

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಇಂದು ಬಿಡುಗಡೆಯಾಗಿದ್ದು ಇದರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡಲಾಗುತ್ತೆ ಎಂದು ಹೇಳಲಾಗಿದೆ. ಈ ವಿಚಾರಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.


ತಮ್ಮ ಟ್ವೀಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಸುನೀಲ್ ಕುಮಾರ್ ಅವರು, ಭಜರಂಗದಳ ಹಾಗೂ ಪಿಎಫ್‌ಐನ್ನ ಒಂದೇ ತಕ್ಕಡಿಯಲ್ಲಿ ಅಳತೆ ಮಾಡುವ ಕಾಂಗ್ರೆಸಿಗರ ಮನಸು ರೋಗಗ್ರಸ್ಥವಾಗಿದೆ. ಪಿಎಫ್‌ಐ ಒಂದು ಭಯೋತ್ಪಾದಕ ಸಂಘಟನೆ ಎಂಬ ಕಾರಣಕ್ಕೆ ನಿಷೇಧ ಮಾಡಿದ್ದೇವೆ. ಭಜರಂಗದಳ ಹಿಂದು ಸಮಾಜ ಮತ್ತು ದೇಶ ಹಿತದ ಸಂಘಟನೆ. ದೇಶಪ್ರೇಮವನ್ನು @INCKarnataka ನಿಷೇಧಿಸುತ್ತದೆಯೇ ? ಎಂದು ಪ್ರಶ್ನಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜೊತೆಗೆ ನಿಮ್ಮ ಹಿಂದು ವಿರೋಧಿ ನಿಲುವಿಗೆ ಧಿಕ್ಕಾರ. ಭಜರಂಗದಳ ಎನ್ನುವುದು ಸಮಾಜ ವಿರೋಧಿ ಸಂಘಟನೆಯಲ್ಲ. ಹಿಂದು ಸಮಾಜದ ರಕ್ಷಣೆಗಾಗಿ, ಗೋಮಾತೆಯ ಹಿತಕ್ಕಾಗಿ, ಹಿಂದು ಸೋದರಿಯರ ಮಾನ ಸಮ್ಮಾನ ಸಂರಕ್ಷಣೆಗಾಗಿ ಎಂಥ ತ್ಯಾಗಕ್ಕೂ ಸಿದ್ದವಾಗಿರುವ ಕಾರ್ಯಕರ್ತರ ಪಡೆ. ಮುಸ್ಲಿಂ ಓಲೈಕೆಗಾಗಿ ಭಜರಂಗದಳ ನಿಷೇಧಿಸುತ್ತೇವೆಂಬ ದಾಷ್ಟ್ಯವೇ..? ಎಂದಿದ್ದಾರೆ..
ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುವುದು ಸೇರಿದಂತೆ ಕಾನೂನು ಕ್ರಮ ತೆಗೆದುಕೊಳ್ಳುವ ವಿಚಾರವನ್ನು @INCKarnataka ಪ್ರಸ್ತಾಪಿಸಿದೆ.

@DKShivakumar ಹಾಗೂ @siddaramaiah ನವರೇ, ನಾವು #PಈI ನಿಷೇಧ ಮಾಡಿದ್ದೇವೆಂಬ ಸಂಕಟ ಹಾಗೂ ದ್ವೇಷವನ್ನು ಭಜರಂಗದಳ ನಿಷೇಧದ ಮೂಲಕ ತೀರಿಸಿಕೊಳ್ಳಲು ಹೊರಟಿದ್ದೀರಾ? ಎಂದು ಪ್ರಶ್ನೆಯ ಸುರಿಮಳೆಗೈದಿದ್ದಾರೆ.
ಕಾಂಗ್ರೇಸ್ ಪಕ್ಷ ಈ ಹಿಂದೂ ಭಯೋತ್ಪಾದಕರಿಗೆ ನೆರವು ನೀಡ್ತಾ ಅವರ ಪರವಾಗಿ ಮಾತನಾಡುತ್ತಿದ್ದಾರೆ. ಇದೀಗ ಸಮಾಜದಲ್ಲಿ ಶಾಂತಿಯಿAದಿರುವ ಬಜರಂಗದಳವನ್ನ ಬ್ಯಾನ್ ಮಾಡುತ್ತೆವೆ ಎಂದು ಹೇಳುವ ಮೂಲಕ ಮತ್ತೆ ವಿವಾದಕ್ಕೆ ಕಾಂಗ್ರೆಸ್ ತುತ್ತಾಗಿದೆ.
ನೀವು ನೀಡುವ ಮತ ಅಮೂಲ್ಯವಾದ್ದು. ಹೀಗಾಗಿ ಪ್ರತಿಯೊಬ್ಬರು ಸರಿಯಾಗಿ ಯೋಚಿಸಿ ಮತ ಹಾಕಿ.