Friday, January 24, 2025
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಹಿಂದೂ ಹೆಣ್ಣು ಮಕ್ಕಳ, ಮಹಿಳೆಯರ ರಕ್ಷಣೆ ಮಾಡುವ ಬಜರಂಗದಳವನ್ನು ಯಾವುದೇ ಕಾರಣಕ್ಕೂ ನಿಷೇಧ ಮಾಡಲು ನಾವು ಬಿಡುವುದಿಲ್ಲ, ಎದೆಗುಂದದೆ ಅವರ ಜತೆ ನಾನಿದ್ದೇನೆ. ಎಲ್ಲಾ ಮಹಿಳೆಯರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ; ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಆಕ್ರೋಶ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಹೆಣ್ಣು ಮಕ್ಕಳ, ಮಹಿಳೆಯರ ರಕ್ಷಣೆ ಜತೆಗೆ ಯಾವುದೇ ಒಂದು ಕೆಲಸವನ್ನು ಒಂದು ನಿರ್ಧಾರ ಇಟ್ಟುಕೊಂಡು ಮಾಡುವ ಬಜರಂಗದಳವನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನಿಷೇಧ ಮಾಡುತ್ತೇವೆ ಎಂದು ಹೇಳಿದ್ದು, ತಾಕತ್ತಿದ್ದರೆ ಕಾಂಗ್ರೆಸ್ ಬಜರಂಗದಳ ಕಾರ್ಯಕರ್ತರ ಮೈಮುಟ್ಟಿ ನೋಡಲಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಆಕ್ರೋಶ.

ಬಜರಂಗದಳ, ವಿಹಿಂಪ, ಹಿಂಜಾವೇ ಇವೆಲ್ಲ ಒಂದಕ್ಕೊಂದು ಪೂರಕವಾಗಿ ಕೆಲಸ ಮಾಡುತ್ತಿದ್ದು, ಹಿಂದೂಗಳ ರಕ್ಷಣ ಮಾಡುವ ಇಂತಹಾ ಸಂಘಟನೆಗಳನ್ನು ಕಾಂಗ್ರೆಸ್ ನಿಷೇಧ ವಿಚಾರ ಎತ್ತಿರುವುದು ಸಹಿಸಲಸಾಧ್ಯ. ಯಾವುದೇ ಕಾರಣಕ್ಕೂ ನಿಷೇಧ ಮಾಡಲು ನಾವು ಬಿಡುವುದಿಲ್ಲ. ಎದೆಗುಂದದೆ ಅವರ ಜತೆ ನಾನಿದ್ದೇನೆ. ಎಲ್ಲಾ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಂಸಕ್ಕಾಗಿ ಗೋಹತ್ಯೆ,, ಕಳ್ಳತನಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಂಗ್ರೆಸ್ ಗೆ ಗೋಶಾಪ ತಟ್ಟದೇ ಇರುವುದಿಲ್ಲ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು