Friday, January 24, 2025
ಉಡುಪಿದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋದಿ ಹವಾ : ಕೊಲ್ನಾಡಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ..! – ಕಹಳೆ ನ್ಯೂಸ್

ರಾಜ್ಯ ವಿಧಾನಸಭಾ ಚು‌ನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಿಂದ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಹೊರವಲಯದ ಮುಲ್ಕಿ ಕೊಲ್ನಾಡಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾವಿರಾರು ಸಂಖ್ಯೆಯ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದ ಅವರು ಈ ರಾಜ್ಯದ ಮತ್ತು ದೇಶದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 13 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಅವರು 13 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು.

ಮತದಾನ ಮಾಡುವ ದಿನ‌ ದೂರವಿಲ್ಲ. ಪ್ರತಿಯೊಬ್ಬ ಮತದಾರ ತನ್ನ ಜವಾಬ್ದಾರಿ ಅರಿತು ಈ ರಾಜ್ಯದ ಪ್ರಗತಿಗಾಗಿ ತಪ್ಪದೆ ಮತ ಚಲಾಯಿಸಬೇಕು. ಕರ್ನಾಟಕವನ್ನು ನಂಬರ್ ಒನ್ ಮತ್ತು ಸೂಪರ್ ಪವರ್ ರಾಜ್ಯವನ್ನಾಗಿಸುವ ಸಂಕಲ್ಪದೊಂದಿಗೆ ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸಬೇಕು ಎಂದು ಅವರು ಮನವಿ ಮಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಮುಖಂಡರಾದ ಶೋಭಾ ಕರಂದ್ಲಾಜೆ, ಪ್ರತಾಪಸಿಂಹ ನಾಯಕ್, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 13 ವಿಧಾನಸಭಾ ಕ್ಷೇತ್ರಗಳ ಬಜೆಪಿ ಅಭ್ಯರ್ಥಿಗಳು ಉಪಸ್ಥಿತರಿದ್ದರು.