ಪಕ್ಷೇತರ ಅಭ್ಯರ್ಥಿ ಪುತ್ತಿಲ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರು ; ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯ –ಕಹಳೆ ನ್ಯೂಸ್
ಪಕ್ಷೇತರ ಅಭ್ಯರ್ಥಿಯು ಬಿಜೆಪಿ ನಾಯಕರ ಭಾವಚಿತ್ರಗಳನ್ನು ಪ್ರಚಾರದಲ್ಲಿ ಬಳಸಿಕೊಳ್ಳುತ್ತಿರುವುದರ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರನ್ನು ನೀಡಿದ್ದಾರೆ.
ಚುನಾವಣಾ ಏಜೆಂಡ್ ರಾಜೇಶ್ ಬನ್ನೂರು ಅವರು ಚುನಾವಣಾಧಿಕಾರಿಗಳಿಗೆ ದೂರನ್ನು ನೀಡಿದ್ದು, ಬಿಜೆಪಿ ಚಿಹ್ನೆಯನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಹಾಗೂ ಅವರ ಬೆಂಬಲಿಗರು ಬಳಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಷ್ಟೇ ಮಾತ್ರವಲ್ಲದೇ ಕ್ರಮ ಸಂಖ್ಯೆ 7ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬ್ಯಾಟ್ ಚಿಹ್ನೆಯನ್ನು ನೀಡಲಾಗಿದ್ದು, ಆದ್ರೆ ಅವರ ಬೆಂಬಲಿಗರು ಬಿಜೆಪಿ ಚಿಹ್ನೆಯ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇದರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.
ನಮ್ಮ ಪುತ್ತೂರು ಎಂಬ ಫೇಸ್ ಬುಕ್ ನಲ್ಲಿ ಕ್ರಮ ಸಂಖ್ಯೆ 7 ‘ಪುತ್ತೂರಿಗೆ ಪುತ್ತಿಲ’ ಎಂಬ ಶಿರೋನಾಮೆಯಡಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯ ಫೋಟೋ ಬಳಸಿಕೊಂಡಿದ್ದಾರೆ. ಜೊತೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ರವರ ಫೋಟೋವನ್ನ ಬಳಸಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಇನ್ನೂ ‘Arunkumar Puthila’ ಎಂಬ ಫೇಸ್ ಬುಕ್ ಪೇಜ್‌ನಲ್ಲಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಭಾವಚಿತ್ರವನ್ನು ಉಪಯೋಗಿಸುತ್ತಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ನಾಯಕರ ಫೋಟೋಗಳನ್ನು ಪ್ರಚಾರದಲ್ಲಿ ಉಪಯೋಗಿಸುವಂತಿಲ್ಲದಿದ್ದರೂ, ಭಾರತೀಯ ಜನತಾ ಪಾರ್ಟಿಯ ನಾಯಕರ ಭಾವಚಿತ್ರಗಳನ್ನು ಬಳಸುತ್ತಿದ್ದು, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ.
ಆದ್ದರಿಂದ ಸಂಬAಧಪಟ್ಟ ಅಧಿಕಾರಿಗಳು ಈ ಕುರಿತು ಖುದ್ದು ಪರಿಶೀಲನೆ ನಡೆಸಬೇಕು. ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯನ್ನು ಮಾಡಿದ ಪಕ್ಷೇತರ ಅಭ್ಯರ್ಥಿಯಾದ ಅರುಣ್ ಕುಮಾರ್ ಪುತ್ತಿಲರವರ ಹಾಗೂ ಅವರ ಬೆಂಬಲಿಗರ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ ಎಂದು ಚುನಾವಣಾಧಿಕಾರಿಗಳಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.