Sunday, January 19, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಬಜರಂಗದಳ ಬ್ಯಾನ್ ಸರಿಯಲ್ಲ ; ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ನಟಿ ರಮ್ಯಾ – ಕಹಳೆ ನ್ಯೂಸ್

ರಾಜ್ಯದಲ್ಲಿ ಬಜರಂಗದಳ (Bajrang Dal) ಬ್ಯಾನ್ ಮಾಡುವ ವಿಚಾರ ರಾಜಕೀಯ ಪಡಸಾಲೆಯಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ಕಾಂಗ್ರೆಸ್ (Congress) ಪಕ್ಷ ಬಿಡುಗಡೆ ಮಾಡಿರುವ ತನ್ನ ಪ್ರಣಾಳಿಕೆಯಲ್ಲಿ ‘ಬಜರಂಗದಳವನ್ನು ನಿಷೇಧ ಮಾಡಲಾಗುವುದು’ ಎಂದಿದೆ. ಇದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕೋಪಕ್ಕೆ ತುತ್ತಾಗಿದೆ. ಅದರಲ್ಲೂ ಬಿಜೆಪಿಯು ಇದನ್ನು ಚುನಾವಣಾ ಅಸ್ತ್ರವಾಗಿ ಕಾಂಗ್ರೆಸ್ ಮೇಲೆ ಪ್ರಯೋಗಿಸುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ರಮ್ಯಾ ವಿಭಿನ್ನವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಬಜರಂಗದಳವನ್ನು ಬ್ಯಾನ್ (Ban) ಮಾಡುತ್ತೇವೆ ಎಂದರೆ, ರಮ್ಯಾ ಈ ನಿಲುವು ಸರಿಯಾದದ್ದು ಅಲ್ಲ. ಒಂದು ಸಂಘಟನೆಯನ್ನು ಬ್ಯಾನ್ ಮಾಡಿದರೆ ಮತ್ತೊಂದು ಸಂಘಟನೆ ಹುಟ್ಟಿಕೊಳ್ಳುತ್ತದೆ’ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ, ಕೆಲವು ಸಲಹೆಗಳನ್ನೂ ರಮ್ಯಾ (Ramya) ಕೊಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬನ್ನೂರಿನಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಬಂದಿದ್ದ ರಮ್ಯಾ, ಮಾಧ್ಯಮಗಳೊಂದಿಗೆ ಮಾತನಾಡಿ, ‘ದ್ವೇಷದ ಭಾಷಣ ಮಾಡುವವರ ವಿರುದ್ಧ ದೂರು ದಾಖಲಿಸಿ ಎಂದು ನ್ಯಾಯಾಲಯವೇ ಹೇಳಿದೆ. ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಕೂಡ ಇದೆ. ಅದನ್ನು ಸಮರ್ಥವಾಗಿ ಜಾರಿಗೆ ತಂದರೆ, ಬಜರಂಗ ದಳ ಬ್ಯಾನ್ ಮಾಡುವಂತಹ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದಿದ್ಧಾರೆ.