Sunday, November 24, 2024
ಕ್ರೈಮ್ರಾಷ್ಟ್ರೀಯಸುದ್ದಿ

ಸೈಕಲಿನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ; ವಿಡಿಯೋ ವೈರಲ್ ಬೆನ್ನಲ್ಲೇ ಜಿಹಾದಿ ಕಾಮುಕ, ಪೇದೆ ಶಹದತ್ ಅಲಿ ಅಮಾನತು – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶ (Uttar Pradesh) ಪೊಲೀಸ್ ಪೇದೆಯೊಬ್ಬ (Police Constable) ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕಿರುಕುಳ (Harassment) ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಪೊಲೀಸ್ ಪೇದೆಯನ್ನು ಶಹದತ್ ಅಲಿ ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದ ದಾರಿಯಲ್ಲಿ ಮಹಿಳೆಯೊಬ್ಬರು ಹೋಗುತ್ತಿದ್ದು, ಕಿರುಕುಳ ನೀಡುವುದನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ತನ್ನ ಸೈಕಲ್‌ನಲ್ಲಿ ಹೋಗುತ್ತಿರುವುದು ಮತ್ತು ಪೊಲೀಸ್ ಪೇದೆ ತನ್ನ ಸ್ಕೂಟರ್‌ನಲ್ಲಿ ಆಕೆಯನ್ನು ಹಿಂಬಾಲಿಸುವ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

CRIME

ಜಾಹೀರಾತು
ಜಾಹೀರಾತು
ಜಾಹೀರಾತು

ಆತನ ಚಲನವಲನಗಳನ್ನು ಗಮನಿಸಿದ ಮಹಿಳೆ ಮತ್ತು ಇನ್ನೋರ್ವ ವ್ಯಕ್ತಿ ಕೋಪಗೊಂಡು ಪೊಲೀಸ್ ಪೇದೆಯನ್ನು ತಡೆದು ಬಾಲಕಿಯನ್ನು ಏಕೆ ಹಿಂಬಾಲಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ನೀವು ಯಾರು? ನಿಮಗೆ ಆಕೆ ಗೊತ್ತಾ ಎಂದು ಕೇಳಿದ್ದಾರೆ. ಈ ವೇಳೆ ಪೊಲೀಸ್ ಪೇದೆಯು ಈಕೆ ತನ್ನ ಮಗುವಿನ ಸಹಪಾಠಿ ಎಂದು ಹೇಳಿಕೊಂಡಿದ್ದಾನೆ. ಆಗ ಮಹಿಳೆ ಮಗುವಿನ ಶಾಲೆಯ ಹೆಸರನ್ನು ಹೇಳುವಂತೆ ಸೂಚಿಸಿದ್ದಾಳೆ. ಈ ವೇಳೆ ಪೊಲೀಸ್ ಪೇದೆ ತಪ್ಪಾದ ಹೆಸರನ್ನು ಹೇಳಿ ಆಕೆಯ ಕೈಯಲ್ಲಿ ಸಿಕ್ಕಿಬಿದ್ದಿದ್ದಾನೆ.

 

ಪೇದೆಯ ಸ್ಕೂಟರ್‌ನಲ್ಲಿ ನಂಬರ್ ಪ್ಲೇಟ್ ಇಲ್ಲದಿರುವುದನ್ನು ಗಮನಿಸಿದ ಮಹಿಳೆ, ನಂಬರ್ ಪ್ಲೇಟ್ ಏಕಿಲ್ಲ ಎಂದು ಪ್ರಶ್ನಿಸಿ ಆತ ಧರಿಸಿದ್ದ ಹೆಲ್ಮೆಟ್ ತೆಗೆಯುವಂತೆ ಸೂಚಿಸಿದ್ದಾಳೆ. ಅದಕ್ಕೆ ಪೊಲೀಸ್ ಪೇದೆ ಇದು ವಿದ್ಯುತ್ ಚಾಲಿತ ವಾಹನವಾಗಿದ್ದು ಇದಕ್ಕೆ ನಂಬರ್ ಪ್ಲೇಟ್ ಇರುವುದಿಲ್ಲ ಎಂದು ಹೇಳಿದ್ದಾನೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸ್ ಪೇದೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ವಿಷಯದ ಗಂಭೀರತೆಯನ್ನು ಅರಿತ ಲಕ್ನೋ (Lucknow) ಪೊಲೀಸರು ಆತನನ್ನು ಅಮಾನತು (Suspend) ಮಾಡಿದ್ದಾರೆ