Friday, November 22, 2024
ಸುದ್ದಿ

ವೈಯುಕ್ತಿಕ ನಿಂದನೆ ಬಿಟ್ಟು ಅಭಿವೃದ್ಧಿಯ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ : ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ –ಕಹಳೆ ನ್ಯೂಸ್

ಕೇವಲ ವೈಯುಕ್ತಿಕ ನಿಂದನೆ ಮತ್ತು ಅಪಪ್ರಚಾರವನ್ನೇ ಬಂಡವಾಳವಾಗಿರಿಸಿಕೊಂಡು ಚುನಾವಣಾ ಕಣಕ್ಕೆ ಇಳಿದಿರುವ ಕಾಂಗ್ರೆಸ್, ಕಾರ್ಕಳ ಕ್ಷೇತ್ರದ ಸುಸಂಸ್ಕೃತ ಮತ್ತು ಸಜ್ಜನಿಕೆಯ ಮನಸ್ಸುಗಳನ್ನು ಕದಡುವ ಕೆಲಸವನ್ನು ಮಾಡುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಜಾಪ್ರಭುತ್ವದ ನೆಲೆಯಲ್ಲಿ ಚುನಾವಣಾ ಸಂದರ್ಭದಲ್ಲಿ ಅಭಿವೃದ್ಧಿ ವಿಚಾರಗಳ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ವಿ.ಸುನಿಲ್ ಕುಮಾರ್ ಬಜಗೋಳಿ ಪೇಟೆಯಲ್ಲಿ ಜರುಗಿದ ಚುನಾವಣಾ ಪ್ರಚಾರ ಭಾಷಣದಲ್ಲಿ ಸವಾಲೊಡ್ಡಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಮಣಿರಾಜ್ ಶೆಟ್ಟಿ , ಕೆಪಿ ಶೆಣೈ, ಉದ್ಯಮಿಗಳಾದ ರವೀಂದ್ರ ಶೆಟ್ಟಿ ಬಜಗೋಳಿ, ಶಶಿಧರ್ ಶೆಟ್ಟಿ ಬರೊಡ, ಸದಾಶಿವ ಸಾಲಿಯಾನ್ ಹರೀಶ್. ಡಿ. ಸಾಲಿಯಾನ್ ಪುಣೆ, ಸಮುಡಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯಕೋಟ್ಯಾನ್, ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ, ಅಲ್ಪಸಂಖ್ಯಾತ ಮೊರ್ಚಾದ ಜೆರಾಲ್ಡ್ ಡಿ ಸಿಲ್ವ ,ಸುರೇಶ್ ಸಾಲ್ಯಾನ್ ಮುಡಾರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು