ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಸೈಂಟ್ ಪೀಟರ್ಸ್ ಮತ್ತು ಸೈಂಟ್ ಪಾಲ್ಸ್ ಜಾಕೋಬೈಟ್ ಸಿರಿಯನ್ ಚರ್ಚ್ಗೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ನಗ-ನಗದು ದೋಚಿದ್ದಾರೆ.
ಚರ್ಚ್ ಕಚೇರಿಗೆ ನುಗ್ಗಿದ ಕಳ್ಳರು ಬೀಗ ಮುರಿದು ಒಳ ಬೀರುವಿನಲ್ಲಿಟ್ಟಿದ್ದ 12 ಗ್ರಾಂ ಚಿನ್ನಾಭರಣ, 250 ಗ್ರಾಂ ಬೆಳ್ಳಿ ಹಾಗೂ 15,880 ರೂ.ನಗದು ಕಳವುಗೈದಿದ್ದಾರೆ.
ಜನರೇಟರ್ ಶೆಡ್‌ನ ಲಾಕರ್ ಒಡೆದು 35 ಲೀಟರ್ ಡೀಸೆಲ್ ಕಳ್ಳತನ ಮಾಡಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಖದೀಮರು1.8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿಯನ್ನು ದೋಚಿದ್ದು, ಈ ಬಗ್ಗೆ ಪೊಲೀಸರಿಂದ ಹೆಚ್ಚಿನ ತನಿಖೆ ಮುಂದುವರೆದಿದೆ.