Friday, January 24, 2025
ಸುದ್ದಿ

ಬಂಟ್ವಾಳದಲ್ಲಿ ಯೋಗಿ ಆದಿತ್ಯನಾಥ್ ಭರ್ಜರಿ ರೋಡ್ ಶೋ; ರಾಜೇಶ್ ನಾಯ್ಕ್ ಪರ ಮತಯಾಚನೆ – ಕಹಳೆ ನ್ಯೂಸ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಟ್ವಾಳಕ್ಕೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರ ಬಿ.ಸಿ.ರೋಡಿನ ಪೊಳಲಿ ದ್ವಾರದಿಂದ ಬಸ್ ನಿಲ್ದಾಣದವರೆಗೆ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಮಾತನಾಡಿ ಬಜರಂಗದಳವನ್ನು ಬ್ಯಾನ್ ಮಾಡಲೇನಾದರೂ ಹೊರಟರೆ, ಜನರು ಖಂಡಿತಾ ಸಹಿಸೋದಿಲ್ಲ. ಭಜರಂಗದಳ ರಾಷ್ಟ್ರವಾದಿ ಸಂಘಟನೆ, ಕರ್ನಾಟಕದ ಜನರ ಜೊತೆ ಇದು ನಡೆಯಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಧಾನಸಭೆ ಚುನಾವಣೆಯಲ್ಲಿ ರಾಜೇಶ್ ನಾಯ್ಕ್ ರನ್ನ ಗೆಲ್ಲಿಸಿ ಅಭಿವೃದ್ಧಿ ಮತ್ತು ರಾಷ್ಟ್ರವಾದ ಗೆಲ್ಲಲು ಬಿಜೆಪಿ ಗೆಲ್ಲಿಸಿ ಎಂದ್ರು. ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸ್ವಾಗತಿಸಿ, ಕಂಚಿನ ಹನುಮಂತನ ಪ್ರತಿಮೆಯನ್ನು ನೆನಪಿನ ಕಾಣಿಕೆಯನ್ನಾಗಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಅವರೊಂದಿಗೆ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ರೋಡ್ ಶೋ ಗೆ ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದೆಡೆಗೆ ಸಾಗಿದರು. ಬಿಜೆಪಿಯ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಸಹಿತ ಪಕ್ಷದ ಜಿಲ್ಲೆ, ತಾಲೂಕು ಮಟ್ಟದ ನಾನಾ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು, ಪುರಸಭಾ ಸದಸ್ಯರು, ಪಂಚಾಯಿತಿ ಸದಸ್ಯರು, ಅಭಿಮಾನಿಗಳು ಯೋಗಿ ಆದಿತ್ಯನಾಥ್ ಜೊತೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು