Recent Posts

Monday, January 20, 2025
ಸುದ್ದಿ

ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನೇತೃತ್ವದಲ್ಲಿ ಸಜೀಪ ಮೂಡ ಗ್ರಾಮಪಂಚಾಯತ್ ವ್ಯಾಪ್ತಿಯ ಪಣೋಲಿಬೈಲಿನ ಬೊಳ್ಳಾಯಿವರೆಗೆ ಬೃಹತ್ ರೋಡ್ ಶೋ –ಕಹಳೆ ನ್ಯೂಸ್

ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಜೀಪ ಮೂಡ ಗ್ರಾಮಪಂಚಾಯತ್ ವ್ಯಾಪ್ತಿಯ ಪಣೋಲಿಬೈಲಿನಿಂದ ಬೊಳ್ಳಾಯಿವರೆಗೆ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪೇಟೆಯಲ್ಲಿರುವ ಅಂಗಡಿಗಳಿಗೆ ತೆರಳಿ ಈ ಬಾರಿ ಬಿಜೆಪಿಗೆ ಮತ ನೀಡಿ ನನ್ನನ್ನು ಅತ್ಯಧಿಕ ಅಂತರದಲ್ಲಿ ಗೆಲ್ಲಿಸಿ ಎಂದು ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಬಾರಿಯ 2018 ರ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಅಭೂತಪೂರ್ವವಾಗಿ ಸಾಧಿಸಿದ ಬಿಜೆಪಿಯ ಗೆಲುವು ಕಾರ್ಯಕರ್ತರ ಗೆಲುವಾಗಿದ್ದು ಬಳಿಕದ ದಿನಗಳಲ್ಲಿ ಪ್ರತಿಯೊಬ್ಬರು ಗೌರವದಿಂದ ನೆಮ್ಮದಿಯ ಜೀವನ ಮಾಡಲು ಸಾಧ್ಯವಾಯಿತು.
ಅದೇ ರೀತಿಯಲ್ಲಿ ಈ ಬಾರಿಯ 2023 ರ ವಿಧಾನ ಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಬಂಟ್ವಾಳದಲ್ಲಿ ಕಮಲವನ್ನು ಅರಳಿಸುವ ಮೂಲಕ ಕಾಂಗ್ರೇಸ್ ಮುಕ್ತವಾದ ಬಂಟ್ವಾಳ ವಾಗಿ ಮಾರ್ಪಾಡು ಮಾಡುವಂತೆ ಮನವಿ ಮಾಡಿದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಟ್ವಾಳದಲ್ಲಿ ಮತಯಾಚನೆ ನಡೆಸಿದ ಬಳಿಕ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿದ್ದು, ಗೆಲುವಿನ ಪೂರಕ ವಾತಾವರಣ ನಿರ್ಮಾವಾಗಿದೆ ಎಂದು ಅವರು ತಿಳಿಸಿದರು.ಕಾಂಗ್ರೇಸ್ ಮಾಡುತ್ತಿರುವ ಅಪಪ್ರಚಾರಗಳಿಗೆ ಬಿಜೆಪಿಯನ್ನು ಅತ್ಯಧಿಕ ಅಂತರಗಳ ಗೆಲುವಿನ ಮೂಲಕ ಉತ್ತರ ನೀಡಬೇಕು ಎಂದು ಅವರು ತಿಳಿಸಿದರು.
ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬ ನಿಟ್ಟಿನಲ್ಲಿ ಬಂಟ್ವಾಳದಲ್ಲಿ ಬಿಜೆಪಿ ಪಕ್ಷವನ್ನು ಸಂಘಟನಾತ್ಮಕವಾಗಿ ಕಟ್ಟಿ ಬೆಳೆಸುವ ಕಾರ್ಯ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಆದ್ಯಕ್ಷ ದೇವಪ್ಪ ಪೂಜಾರಿ, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮುಂಬಯಿ ಮಹಾನಗರ ಪಾಲಿಕೆ ಕಾರ್ಪೋರೆಟರ್ ಸಂತೋಷ್ ಶೆಟ್ಟಿ ದಳಂದಿಲ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಪಕ್ಷದ ಪ್ರಮುಖರಾದ ವಿವೇಕ್ ಶೆಟ್ಟಿ ನಗ್ರಿಗುತ್ತು, ಶ್ರೀಕಾಂತ್ ಶೆಟ್ಟಿ ಸಜೀಪ, ಪ್ರವೀಣ್ ಗಟ್ಟಿ, ಸುಪ್ರೀತ್ ಆಳ್ವ, ಪುರುಷೋತ್ತಮ ಸಾಲಿಯಾನ್, ಉದಯ ಪೂಜಾರಿ ಕಾಂಜಿಲ,ಉದಯ ಕುಮಾರ್ ರಾವ್,ಚರಣ್ ಜುಮಾದಿಗುಡ್ಡೆ, ಯಶವಂತ ನಗ್ರಿ, ಲೋಹಿತ್ ಪನೋಲಿಬೈಲು,
ವಿರೇಂದ್ರ ಕುಲಾಲ್, ಸೀತಾರಾಮ, ಪ್ರಶಾಂತ್ ಪೂಜಾರಿ, ಗಿರೀಶ್ ಕುಲಾಲ್, ಯೋಗೀಸ್ ಪೂಜಾರಿ, ಕೃಷ್ಣಭಟ್, ಸುರೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.