Tuesday, January 21, 2025
ಸುದ್ದಿ

ವಿಧಾನಸಭಾ ಚುನಾವಣೆ ಹಿನ್ನಲೆ ಇಂದಿನಿಂದ ನಾಲ್ಕು ದಿನ ಮದ್ಯ ಮಾರಾಟ ಬಂದ್ – ಕಹಳೆ ನ್ಯೂಸ್

ವಿಧಾನಸಭಾ ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ನಾಲ್ಕು ದಿನ ಕಾಲ ಮದ್ಯ ಮಾರಾಟ ಬಂದ್ ಆಗಲಿದೆ. ಇಂದು ಸಂಜೆಯಿಂದಲೇ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಲಿದ್ದು, ಮಧ್ಯಪ್ರಿಯರು ನಿನ್ನೆಯೇ ಮದ್ಯದಂಗಡಿಗಳಿಗೆ ಜಮಾಯಿಸಿ ಮಧ್ಯ ಖರೀದಿಸಿದ್ದಾರೆ. ಭಾನುವಾರ ಎಲ್ಲೆಡೆ ಮದ್ಯದಂಗಡಿಗಳಲ್ಲಿ ಬೇಡಿಕೆ ಭಾರಿ ಹೆಚ್ಚಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

8, 9, 10 ಹಾಗೂ ಚುನಾವಣೆ ಫಲಿತಾಂಶ ದಿನವಾದ ಮೇ 13ರಂದು ಕೂಡಾ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಲಿದೆ. ನಾಲ್ಕು ದಿನಗಳ ಮದ್ಯ ದಾಸ್ತಾನಿಗೂ ಕಡಿವಾಣ ಹಾಕುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರ ಸಂಜೆ 5ಗಂಟೆಯಿಂದ ಮದ್ಯ ಮಾರಾಟ ಮತ್ತು ಸಾಗಣೆಗೆ ನಿಷೇಧ ಜಾರಿಯಾಗಲಿದೆ. ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ದಿನಾಂಕದ 48 ಗಂಟೆಗಳ ಮುನ್ನ ಅವಧಿಯಲ್ಲಿ ಅಂದರೆ, ಮೇ 8ರ ಸಂಜೆ 5ರಿಂದ ಮೇ10ರ ಮಧ್ಯರಾತ್ರಿ 12 ಗಂಟೆವರೆಗೆ ಎಲ್ಲ ಕಡೆಗಳಲ್ಲ್ಲೂ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ಮತ್ತು ಪೂರೈಕೆ ನಿಷೇಧಿಸಲಾಗಿದೆ.

ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ ಹೊರಡಿಸಿದ್ದಾರೆ. ಅದೇ ರೀತಿ, ಮತ ಎಣಿಕೆ ದಿನವೂ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಮೇ 13ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದಂಗಡಿಗಳು ಬಂದ್ ಆಗಲಿವೆ.
ನಾಲ್ಕು ದಿನಗಳ ಅವಧಿಯಲ್ಲಿ ಮದ್ಯ ದಾಸ್ತಾನು ಮಾಡುವುದಕ್ಕೆ ಕಡಿವಾಣ ಹಾಕಬೇಕು. ಈ ಕುರಿತಂತೆ ಸಮಗ್ರ ನಿರ್ದೇಶನಗಳನ್ನು ನೀಡಬೇಕು ಎಂದು ಆಯೋಗವು ರಾಜ್ಯ ಸರಕಾರಕ್ಕೆ ಬರೆದು ಸೂಚನೆ ನೀಡಿತ್ತು.