Friday, January 24, 2025
ಸುದ್ದಿ

ಮಂಗಳೂರಿನ ಗೋರಿ ಗುಡ್ಡೆ, ಬಜಾಲ್, ಸೆಂಟ್ರಲ್ ವಾರ್ಡ್, ಕಟ್ಟಪುಣಿ, ವಿವೇಕ ನಗರ ವಾರ್ಡ್ ಗಳಲ್ಲಿ ಮನೆ ಮನೆ ತೆರಳಿ ಮತಯಾಚನೆ ಮಾಡಿದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಪ್ಪಿನಮೊಗರು, ಗೋರಿ ಗುಡ್ಡೆ, ಬಜಾಲ್, ಸೆಂಟ್ರಲ್ ವಾರ್ಡ್, ಕಟ್ಟಪುಣಿ, ವಿವೇಕ ನಗರ ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ ಕಾಮತ್ ಅವರು ಮನೆ ಮನೆಗೆ ತೆರಳಿ ಮತಯಾಚಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೆರಡು ದಿನಗಳಲ್ಲಿ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ಜವಾಬ್ದಾರಿಯಾಗಿರುವ ಮತದಾನದ ದಿನ ಬರಲಿದೆ. ಆ ದಿನ
ಎಲ್ಲರೂ ಮತಗಟ್ಟೆಗೆ ಹೋಗಿ ಬಿಜೆಪಿ ಪರ ಮತ ಚಲಾಯಿಸಿ, ಸ್ಥಿರ ಸರಕಾರಕ್ಕೆ ಬೆಂಬಲ ನೀಡಬೇಕು. ಆ ಮೂಲಕ ಭವಿಷ್ಯದ ಜನಾಂಗಕ್ಕೆ ಉತ್ತಮ ನಾಡನ್ನು ಕಟ್ಟಿಕೊಡಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಅತ್ಯಧಿಕ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು, ಹಿರಿಯ ಮುಖಂಡರು ಉಪಸ್ಥಿತರಿದ್ದರು.