Thursday, January 23, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮತದಾನಕ್ಕೆ ಮತದಾರರನ್ನು ವಾಹನದಲ್ಲಿ ಕರೆ ತರುವುದು ಅಪರಾಧ – ಕಹಳೆ ನ್ಯೂಸ್

ರ್ನಾಟಕ, ಮೇ9 ; ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮೇ 10 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಚುನಾವಣಾ ಆಯೋಗ ಮತದಾನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲಾ ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಲಾಗಿದೆ.

ಚುನಾವಣಾನಿಯಮದ ಪ್ರಕಾರ ಯಾವುದೇ ಪಕ್ಷದವರು ಹಾಗೂ ಅಭ್ಯರ್ಥಿಗಳು ಮತದಾರರನ್ನು ಕ್ಷೇತ್ರದ ಹೊರಗಿನಿಂದ ಅಥವಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ಮಾಡಲು ವಾಹನಗಳಲ್ಲಿ ಕರೆದುಕೊಂಡು ಬರುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಯಾವುದೇ ಮತದಾರರನ್ನು ಬಸ್ಸು ಅಥವಾ ಇತರೆ ವಾಹನಗಳಲ್ಲಿ ಕರೆದುಕೊಂಡು ಬರುವುದು ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ ಅನ್ವಯ ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದವರ ವಿರುದ್ಧ ಕಾಯ್ದೆ ಅನುಸಾರ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮತದಾರರು ಯಾವುದೇ ಆಸೆ ಮತ್ತು ಆಮಿಷ, ಪ್ರಭಾವ, ಬೆದರಿಕೆಗೆ ಮಣಿಯದೇ ಸ್ವ-ಇಚ್ಛೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಚುನಾವಣಾ ಆಯೋಗ ಕರೆ ನೀಡಿದೆ. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ 2,66,82,156 ಪುರುಷ, 2,63,98,483 ಮಹಿಳೆ ಮತ್ತು ಇತರೆ 4,927 ಮತದಾರರು ಸೇರಿ 5,30,85,566 ಮತದಾರರು ಮತದಾನಕ್ಕೆ ಅರ್ಹರು.

ಬಹಿರಂಗ ಪ್ರಚಾರಕ್ಕೆ ತೆರೆ ವಿಧಾನಸಭೆ ಚುನಾವಣೆಗೆ ಮತದಾನ ಮೇ 10ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ನಂತರ ಯಾವುದೇ ರಾಜಕೀಯ ಪಕ್ಷಗಳು ಮತ್ತು ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಅವರ ಚುನಾವಣಾ ಏಜೆಂಟ್‍ಗಳು ಮತ್ತು ಬೆಂಬಲಿಗರು ಬಹಿರಂಗ ಪ್ರಚಾರ ನಡೆಸುವುದನ್ನು ನಿರ್ಬಂಧಿಸಲಾಗಿದೆ.

ಆದರೆ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚಿಸುವುದನ್ನು ಮತ್ತು ಕರಪತ್ರಗಳನ್ನು ವಿತರಿಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಪ್ರಜಾಪ್ರತಿನಿಧಿ ಕಾಯ್ದೆ-1951 ಮತ್ತು ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಮತದಾರರಲ್ಲದವರು ಕ್ಷೇತ್ರ ಬಿಡಬೇಕು. ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು. ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು/ ಹೋಟೆಲ್‍ಗಳು ಮತ್ತು ಅತಿಥಿಗೃಹಗಳನ್ನು ವಾಸ್ತವ್ಯ ಹೊಡಿದವರ ಪಟ್ಟಿಗಳ ಪರಿಶೀಲನೆ ಮಾಡಿ ಮತದಾರರಲ್ಲದವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮ ಜರುಗಿಸಲಾಗುತ್ತದೆ. ಈ ಆದೇಶವನ್ನು ಪಾಲಿಸಲು ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮತದಾನಕ್ಕೆ ಅನುಕೂಲವಾಗುವಂತೆ ಮೇ 10ರಂದು ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ-1993ರ ನಿಯಮ 36 ರಡಿಯಲ್ಲಿ ಮತದಾನದ ದಿನದಂದು ನಡೆಯುವ ಜಾತ್ರೆ, ದನಗಳ ಸಂತೆ, ಉತ್ಸವಗಳು ಹಾಗೂ ಉರುಸ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

ಮತದಾನದಿನದ ದಿನ ಮತದಾನ ಮಾಡಲು ಅನುಕೂಲವಾಗುವಂತೆ ನೌಕರರು ಮತ್ತು ಸಿಬ್ಬಂದಿ ವರ್ಗ ಮತ ಚಲಾಯಿಸಲು ಅನುಕೂಲವಾಗುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು), ಸ್ಥಳೀಯ ಸಂಸ್ಥೆಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು ಮುಂತಾದ ಕಚೇರಿಗಳಿಗೆ ಸೀಮಿತಗೊಳಿಸಿ ನೆಗೋಷಿಯೇಬಲ್ ಇನ್‍ಸ್ಟ್ರುಮೆಂಟ್ ಕಾಯ್ದೆ-1881ರ ಸೆಕ್ಷನ್ 25ರ ಪ್ರಕಾರ ಸಿಬ್ಬಂದಿಗಳಿಗೆ ವೇತನ ಸಹಿತ ಕಚೇರಿಗಳಿಗೆ ರಜೆ ಘೋಷಿಸಿ ರಜೆ ಘೋಷಣೆ ಮಾಡಲಾಗಿದೆ.