Thursday, April 10, 2025
ಸುದ್ದಿ

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ – ಕಹಳೆ ನ್ಯೂಸ್

ಪುತ್ತೂರು: ಹದಿನೆಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯು ಬೆಂಗಳೂರು ಏರ್ ಪೋರ್ಟ್ ನಲ್ಲಿ ಪತ್ತೆ ಮಾಡಲಾಗಿದ್ದು ದಸ್ತಗಿರಿ ಮಾಡುವ ವೇಳೆ ಬೆಳಕಿಗೆ ಬಂದಿದೆ.

ಪುತ್ತೂರಿನ ಬನ್ನೂರಿನ ನಿವಾಸಿಯಾದ ಸಿಗ್ಬತ್ 2001ರಲ್ಲಿ ಪುತ್ತೂರಿನ ಮದುವೆಯೊಂದರಲ್ಲಿ ತಕರಾರು ಪಂಚಾಯಿತಿ ವೇಳೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದನು. ಇವನ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಾಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಇವನು ನಂತರ ಪೊಲೀಸರ ಕಣ್ಣಿಗೆ ಮಣ್ಣೆರಚಿ ಊರು ಬಿಟ್ಟಿದ್ದ ಎನ್ನಲಾಗಿದೆ. ಇವನು ದುಬೈನಿಂದ ಬೆಂಗಳೂರು ಏರ್ ಪೋರ್ಟ್ ನಲ್ಲಿ ಬಂದಿಳಿದ ವೇಳೆ ದಸ್ತಗಿರಿ ನಡೆಸಿದಾಗ ಸಿಕ್ಕಿಬಿದ್ದಿದ್ದು ಕೇಸ್ ರಿ ಓಪನ್ ಆಗುವ ಎಲ್ಲಾ ಸಾಧ್ಯತೆಗಳಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ