Saturday, November 23, 2024
ರಾಜಕೀಯಸುದ್ದಿ

ವಿಧಾನಸಭಾ ಚುನಾವಣೆ : ಕಡ್ಡಾಯ ಮಾರ್ಗಸೂಚಿ ಪಾಲನೆಗೆ ಚಿಲ್ಲಾಧಿಕಾರಿ ಸೂಚನೆ – ಕಹಳೆ ನ್ಯೂಸ್

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬAಧಿಸಿದAತೆ ಮೇ 10ರಂದು ಚುನಾವಣೆ ನಡೆಯಲಿದ್ದು ಚುನಾವಣೆಯ ಮತ ಎಣಿಕೆ ಮೇ 13ರಂದು ಸುರತ್ಕಲ್‌ನಲ್ಲಿರುವ ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ.

ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್‌ಗಳು, ಮತ ಎಣಿಕೆ ಕೇಂದ್ರಕ್ಕೆ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಮೇಲ್ವಿಚಾರಕರು, ಸಹಾಯಕರು, ಗ್ರೂಪ್ ಡಿ ಸಿಬ್ಬಂದಿ ಮತ್ತು ಇನ್ನಿತರ ಎಲ್ಲಾ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಆವರಣದೊಳಗೆ ಪ್ರವೇಶಿಸುವಾಗ ಮೊಬೈಲ್, ಎಲೆಕ್ಟ್ರಾನಿಕ್ಸ್ ವಾಚ್, ಮತ್ತು ಇನ್ನಿತರೇ ಡಿಜಿಟಲ್ ತಂತ್ರಜ್ಞಾನದ ಉಪಕರಣಗಳೊಂದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರಾತಿ ನಿಧಿ ಕಾಯಿದೆ 1951ರ ಕಲಂ 126 ಹಾಗೂ ಭಾರತೀಯ ದಂಡ ಸಂಹಿತೆಯ ಕಾಯಿದೆನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಹಾಗೂ ಜಿಲ್ಲಾಧಿಕಾರಿ ರವಿಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮತದಾರರು ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಮೇ10ರ ಬುಧವಾರ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು) ಮೇ 10ರಂದು ರಜೆ ಘೋಷಿಸಲಾಗಿದೆ.

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಸರಕಾರಿ ನೌಕರರು ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಡಿಪಿಎಆರ್‌ನ ಅಧೀನ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಸ್ಥಳೀಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮುಖಂಡರು ಅಥವಾ ಇನ್ನಿತರೇ ರಾಜಕೀಯ ಸಂಬAಧಿತ ವ್ಯಕ್ತಿಗಳು ಮೇ 8ರ ಸಂಜೆ 6 ಗಂಟೆಯೊಳಗೆ ಚುನಾವಣಾ ಕ್ಷೇತ್ರ ಬಿಟ್ಟು ಹೋಗಬೇಕಾಗುತ್ತದೆ.

ಯಾವುದೇ ಬಾರ್, ರೆಸ್ಟೋರೆಂಟ್, ಹೋಟೆಲ್, ಸಭಾಭವನ ಸಮುದಾಯ ಭವನ, ಕಲ್ಯಾಣ ಮಂಟಪ, ಅತಿಥಿಗೃಹ, ವಸತಿಗೃಹ, ಹೋಂ ಸ್ಟೇಗಳಲ್ಲಿ ಉಳಿದುಕೊಂಡಲ್ಲಿ ಅಂತವರಿಗೆ ಆಸ್ಪದವಿರುವುದಿಲ್ಲ. ಮೇ 8ರ ಸಂಜೆ 6 ಗಂಟೆಯ ನಂತರ ಅನಧಿಕೃತವಾಗಿ ಉಳಿದುಕೊಂಡಲ್ಲಿ ಆ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬಹುದಾಗಿದೆ.

ಇದನ್ನು ಉಲ್ಲಂಘಿಸಿ ಆಶ್ರಯ ನೀಡುವ ಮಾಲಕರ ವಿರುದ್ಧ ಪ್ರಜಾಪ್ರತಿನಿಧಿಯ ಕಾಯಿದೆ 1951ರ ಕಲಂ 126 ಹಾಗೂ ಭಾರತೀಯ ದಂಡ ಸಂಹಿತೆ ಕಾಯಿದೆ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.