‘ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿ’ : ಪ್ರಧಾನಿ ಮೋದಿ ಮನವಿ –ಕಹಳೆ ನ್ಯೂಸ್
ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿAದ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿAದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರು ಎಲ್ಲರೂ ತಪ್ಪದೇ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಜನರು, ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುವವರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿ ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಒಟ್ಟು 5, 31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಹಾಗೂ 2,64,00,074 ಕೋಟಿ ಮಹಿಳಾ ಮತದಾರರಿದ್ದಾರೆ. ಜೊತೆಗೆ 11, 71,558 ಯುವ ಮತದಾರರು ಇದ್ದಾರೆ. ಒಟ್ಟು ಮತದಾರರ ಪೈಕಿ 4,92,85,247 ಮತದಾರರಿಗೆ ಮತದಾರರ ಚೀಟಿ ವಿತರಿಸಲಾಗಿದೆ. ರಾಜ್ಯದಲ್ಲಿ ಸಕ್ರಿಯ ಮತಗಟ್ಟೆ ಕೇಂದ್ರಗಳು- 58,282, ಹೆಚ್ಚುವರಿ ಮತಗಟ್ಟೆ ಕೇಂದ್ರಗಳು- 263 ಒಳಗೊಂಡು ಒಟ್ಟು – 58,545 ಮತಗಟ್ಟೆಗಳು ಇವೆ. ಈ ಮತಗಟ್ಟೆಗಳಲ್ಲಿ ಮತದಾನಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
‘