Wednesday, January 22, 2025
ಸುದ್ದಿ

ಶಿಗ್ಗಾಂವಿಯ ಸರ್ಕಾರಿ ಶಾಲೆಯಲ್ಲಿ ಮತಚಲಾಯಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ –ಕಹಳೆ ನ್ಯೂಸ್

ರಾಜ್ಯ ವಿಧಾಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮತಹಕ್ಕು ಚಲಾಯಿಸುವುದಕ್ಕೂ ಮುನ್ನ ಮುಖ್ಯಮಂತ್ರಿಗಳು ಹುಬ್ಬಳ್ಳಿಯ ಹನುಮನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಬೊಮ್ಮಾಯಿಯವರು ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಪಕ್ಷದ ಪ್ರಚಾರದ ರೀತಿ ಮತ್ತು ಜನರು ಪ್ರತಿಕ್ರಿಯಿಸಿದ ರೀತಿ ಬಹಳ ಸಂತೋಷವನ್ನು ತಂದಿದೆ. ಪ್ರಜಾಪ್ರಭುತ್ವದ ಗೆಲುವಿಗಾಗಿ ಎಲ್ಲರೂ ಮತದಾನ ಮಾಡಿ. ನಾವೆಲ್ಲರೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ ಮತದಾನ ಮಾಡಿದ್ದೇವೆ. ನೀವು ಕೂಡ ಮನೆಗಳಿಂದ ಹೊರಬಂದು ನಿಮ್ಮ ಹಕ್ಕು ಚಲಾಯಿಸಿ. ಕರ್ನಾಟಕ ಅಭಿವೃದ್ಧಿಗಾಗಿ ಮತ ಹಕ್ಕು ಚಲಾಯಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಡಿನ ಉದ್ದಗಲಕ್ಕೂ ನಾನು ಸಂಚರಿಸಿದ್ದು, ಈ ಬಾರಿ ಜನತೆಯ ಒಲವು ಭಾರತೀಯ ಜನತಾ ಪಕ್ಷದ ಪರವಿದ್ದು, ಜನತೆ ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರಕ್ಕೆ ಆಶೀರ್ವದಿಸುತ್ತಾರೆಂಬ ಸಂಪೂರ್ಣ ವಿಶ್ವಾಸ ನನ್ನದಾಗಿದೆ ಎಂದರು.
ಇನ್ನು ಇಂದು ನನ್ನ ತವರು ಶಿಗ್ಗಾಂವಿಯ ಸರ್ಕಾರಿ ಶಾಲೆಯಲ್ಲಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ, ನನ್ನ ಕುಟುಂಬ ಸದಸ್ಯರೊಂದಿಗೆ ಮತ ಚಲಾಯಿಸಿದೆನು. ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಬೇಕೆಂದು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.