Monday, November 25, 2024
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮಂಗಳೂರಿನ ಹೊರವಲಯದ ಮುಡುಶೆಡ್ಡೆಯಲ್ಲಿ ಕೈ – ಕಮಲ ಕಾರ್ಯಕರ್ತರ ನಡುವೆ ಘರ್ಷಣೆ ; ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಧ್ವಂಸ – 144 ಸೆಕ್ಷನ್ ಜಾರಿ – ಕಹಳೆ ನ್ಯೂಸ್

ಮಂಗಳೂರು (ಮೇ 10, 2023): ಮಂಗಳೂರಲ್ಲಿ ಕರ್ನಾಟಕದ ಮತದಾನದ ದಿನವೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ ನಡೆಸಿರೋ ಘಟನೆಯೂ ವರದಿಯಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘರ್ಷಣೆ ನಡೆದಿದ್ದು, ಈ ಗಲಾಟೆಯಲ್ಲಿ  ಮೂಡಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ದ್ವಂಸವಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಕೈ – ಕಮಲ ಕಾರ್ಯಕರ್ತರ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಳಿದುಬಂದಿದೆ. ಇನ್ನು, ಈ ಕಲ್ಲು ತೂರಾಟದ ವೇಳೆ ಪೊಲೀಸ್ ಸಿಬ್ಬಂದಿ ತಲೆಗೆ ಸಹ ಗಾಯವಾಗಿದೆ. ಸ್ಥಳದಲ್ಲಿ ಬಿಜೆಪಿ – ಕಾಂಗ್ರೆಸ್‌ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.