Tuesday, January 21, 2025
ಬೆಂಗಳೂರು

ಸಿ.ಟಿ.ರವಿ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕಿಡ್ನಿ ಸಂಬಂಧಿ ಸಮಸ್ಯೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವ ಸಿ.ಟಿ.ರವಿ ಅವರ ಆರೋಗ್ಯ ಮೇ 10ರ ನಿನ್ನೆ ಮಧ್ಯರಾತ್ರಿ ಏರುಪೇರಾದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಕೆಲವು ದಿನಗಳಿಂದ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವ ಅವರು, ಈ ಮುನ್ನವೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಹೀಗಾಗಿ, ಚುನಾವಣೆಗೆ ಸಂಬಂಧಿಸಿದ ಕೆಲವು ರ‍್ಯಾಲಿಗಳಿಗೂ ಸಹ ಗೈರಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು