Monday, January 20, 2025
ಸುದ್ದಿ

ಪ್ರೀತಿ ನಿರಾಕರಣೆ : ಅಪ್ರಾಪ್ತ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪ್ರಿಯತಮ –ಕಹಳೆ ನ್ಯೂಸ್

ಪ್ರೀತಿ ನಿರಾಕರಿಸಿದ್ದಕ್ಕೆ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗ್ರಾಮದ 25 ವರ್ಷದ ವಿನಯ್ ಕುಮಾರ್ ಎಂಬಾತನಿoದ ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ . ಬಾಲಕಿ ಕತ್ತಿಗೆ ಮಚ್ಚಿನಿಂದ ಬರ್ಬರವಾಗಿ ಹಲ್ಲೆ ಮಾಡಲಾಗಿದ್ದು, ಬಾಲಕಿ ಪರಿಸ್ಥಿತಿ ಗಂಭೀರವಾಗಿದೆ. ಕೂಡಲೇ ಬಾಲಕಿಯನ್ನ ಹಾಸನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಈ ಕುರಿತು ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.