Monday, January 20, 2025
ಸುದ್ದಿ

ಇಮ್ರಾನ್ ಖಾನ್ ಆಪ್ತ ಸಹಾಯಕ ಶಾ ಮೆಹಮೂದ್ ಖುರೇಷಿಯನ್ನ ಬಂಧಿಸಿದ ರಾಷ್ಟ್ರೀಯ ಭ್ರಷ್ಟಾಚಾರ ನಿಗ್ರಹ ದಳ –ಕಹಳೆ ನ್ಯೂಸ್

ಇಸ್ಲಾಮಾಬಾದ್ ಹೈಕೋರ್ಟ್ನ  ಕೋಣೆಗೆ ನುಗ್ಗಿದ ರಾಷ್ಟ್ರೀಯ ಭ್ರಷ್ಟಾಚಾರ ನಿಗ್ರಹ ದಳ (ಎನ್‌ಎಬಿ) ಅಧಿಕಾರಿಗಳ ಆದೇಶದ ಮೇರೆಗೆ ಅರೆಸೈನಿಕ ಪಡೆಗಳು ಪಿಟಿಐ ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ವಶಕ್ಕೆ ತೆಗೆದುಕೊಂಡ ಎರಡು ದಿನಗಳ ನಂತರ ಖರೇಷಿ ಬಂಧನವಾಗಿದೆ.

ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ, ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಅವರ ಆಪ್ತ ಸಹಾಯಕ ಶಾ ಮೆಹಮೂದ್ ಖುರೇಷಿ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಪಾಕಿಸ್ತಾನದಲ್ಲಿನ ರಾಜಕೀಯ ಪ್ರಕ್ಷುಬ್ಧತೆಯ ನಡುವೆ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜಧಾನಿ ಮತ್ತು ಮೂರು ಪ್ರಾಂತ್ಯಗಳಲ್ಲಿ ಸೇನೆ ನಿಯೋಜಿಸಲಾಗಿದೆ. ಖುರೇಷಿಯವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷವು ಟ್ವಿಟರ್‌ನಲ್ಲಿ ಹಂಚಿಕೊAಡಿರುವ ವಿಡಿಯೊದಲ್ಲಿ ಸಾದಾ ಬಟ್ಟೆ ಧರಿಸಿದ ವ್ಯಕ್ತಿಗಳು ಅವರನ್ನು ಕರೆದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ. ಅವರು ಬಂಧಿಸಲ್ಪಟ್ಟ ಸ್ಥಳದಿಂದ ಹೊರಡುವ ಮೊದಲು ಪಕ್ಷದ ಕಾರ್ಯಕರ್ತರತ್ತ ಕೈ ಬೀಸಿದರು. 66 ವರ್ಷದ ಶಾ ಮೆಹಮೂದ್ ಖುರೇಷಿ ಅವರನ್ನು ಗುರುವಾರ ಮುಂಜಾನೆ ಇಸ್ಲಾಮಾಬಾದ್ ಪೊಲೀಸರು ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಪಿಟಿಐ ಹೇಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭ್ರಷ್ಟಾಚಾರ ವಿರೋಧಿ ನ್ಯಾಯಾಲಯವು ಬುಧವಾರ 70 ವರ್ಷದ ಮಾಜಿ ಪ್ರಧಾನಿಯನ್ನು ಎಂಟು ದಿನಗಳ ಬಂಧನದಲ್ಲಿರಿಸಲು ಭ್ರಷ್ಟಾಚಾರ ನಿಗ್ರಹ ದಳ ಆದೇಶಿಸಿದೆ. ಮಂಗಳವಾರ ಇಮ್ರಾನ್ ಖಾನ್ ಅವರ ನಾಟಕೀಯ ಬಂಧನವು ಪಾಕಿಸ್ತಾನದಾದ್ಯಂತ ವ್ಯಾಪಕ ಹಿಂಸಾತ್ಮಕ ಪ್ರತಿಭಟನೆಯನ್ನು ಹುಟ್ಟುಹಾಕಿತು, ಪ್ರತಿಭಟನಾಕಾರರು ಮತ್ತು ಕಾನೂನು ಜಾರಿ ಸಂಸ್ಥೆಗಳ ನಡುವಿನ ಘರ್ಷಣೆಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದರು ಮತ್ತು ಸುಮಾರು 300 ಜನರು ಗಾಯಗೊಂಡರು. ದೇಶದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ.