Recent Posts

Sunday, January 19, 2025
ಸುದ್ದಿ

ಹಾಡಹಗಲೆ ಕೆಸ್‌ಆರ್‌ಟಿಸಿ ಬಸ್ ಚಾಲಕನ ಬರ್ಬರ ಹತ್ಯೆ – ಕಹಳೆ ನ್ಯೂಸ್

ಹಾಡಹಗಲೆ ಕೆಎಸ್‌ಆರ್‌ಟಿಸಿ ಬಸ್ ಚಾಲಕನನ್ನ ಬರ್ಬರ ಹತ್ಯೆ ಮಾಡಿದ ಘಟನೆ ಕಲಬುರಗಿ ನಗರದ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾಗಯ್ಯಾ ಸ್ವಾಮಿ (45) ದುಷ್ಕರ್ಮಿಗಳಿಂದ ಹತ್ಯೆಯಾದ ದುರ್ದೈವಿ.

ನಾಗಯ್ಯ ಸ್ವಾಮಿ ಅಫಜಲಪುರ ತಾಲ್ಲೂಕಿನ ಮದರಿ ಗ್ರಾಮದ ನಿವಾಸಿವಾಗಿದ್ದು, ಸಾರಿಗೆ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸಿಟಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಕೆಳಗಿಳಿಯುತ್ತಿದ್ದಂತೆ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.ಈ ವೇಳೆ ನಾಗಯ್ಯ ಸ್ವಾಮಿ ಅವರ ಕೈ ಹೆಬ್ಬೆರಳು ತುಂಡಾಗಿದೆ. ತಕ್ಷಣವೇ ಅವರು ಓಡಲು ಯತ್ನಿಸುತ್ತಾರೆ. ಆದರೂ ದುಷ್ಕರ್ಮಿಗಳು ಅವರನ್ನು ಬೆನ್ನಟ್ಟಿ ಅಟ್ಟಾಡಿಸಿ ಭೀಕರವಾಗಿ ಹತ್ಯೆಗೈಯ್ಯುದು ಅಲ್ಲಿಂದ ಪರಾರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಳೆ ವೈಷಮ್ಯ ಹಿನ್ನೆಲೆ ನಾಗಯ್ಯ ಸ್ವಾಮಿ ಅವರನ್ನು ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಸದ್ಯ ಸಿಟಿ ಬಸ್ ನಿಲ್ದಾಣದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಸ್ಥಳಕ್ಕೆ ಬ್ರಹ್ಮಪುರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದು, ಬ್ರಹ್ಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು