Recent Posts

Sunday, January 19, 2025
ಮೂಡಬಿದಿರೆರಾಜಕೀಯಸುದ್ದಿ

ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಘರ್ಷಣೆ ವಿಚಾರ ; ನಾಲ್ವರು ಅರೋಪಿಗಳ ಬಂಧನ –ಕಹಳೆ ನ್ಯೂಸ್

ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬAಧಪಟ್ಟAತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಬAಧಿತರನ್ನು ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೆಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಗೆ ಸಂಬAಧಿಸಿ ಆರೋಪಿಗಳ ವಿರುದ್ಧ ಐದು ಎಫ್ ಐ ಆರ್ ದಾಖಲಿಸಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾದ ಇತರ ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.

ಮೇ 10 ರಂದು ಮತದಾನದ ಬಳಿಕ ಮೂಡುಶೆಡ್ಡೆಯ ಮತಗಟ್ಟೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಡ ನಡೆದಿತ್ತು. ಘಟನೆಯ ನಂತರ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದರು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.