Recent Posts

Friday, November 22, 2024
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ವರುಣಾರ್ಭಟಕ್ಕೆ ನಾಲ್ವರು ಬಲಿ : ಇನ್ನೂ 3-4 ದಿನ ಭಾರೀ ಮಳೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಮೂರು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿ ಅನಾಹುತಕ್ಕೆ ನಾಲ್ವರು ಬಲಿಯಾಗಿದ್ದಾರೆ. ಮಂಡ್ಯ, ಶಿವಮೊಗ್ಗ, ಚಾಮರಾಜನಗರ, ವಿಜಯನಗರ, ಹುಬ್ಬಳ್ಳಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವೈದ್ಯನಾಥಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮದು (34) ಎಂಬುವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಮದ್ದೂರು ಪಟ್ಟಣದ ಶಿವಪುರ ನಿವಾಸಿ ಗೌರಮ್ಮ (60) ಎಂಬುವರು ಸಿಡಿಲಿನ ಆರ್ಭಟಕ್ಕೆ ಮನೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರು ಮಸೀದಿ ಬಳಿ ಚಲಿಸುತ್ತಿದ್ದ ರಿಕ್ಷಾ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.