Recent Posts

Sunday, January 19, 2025
ಸುದ್ದಿ

ಮಗುವಿನೊಂದಿಗೆ ನಾಪತ್ತೆಯಾದ ಮಹಿಳೆ – ಕಹಳೆ ನ್ಯೂಸ್

ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ನಾಪತ್ತೆಯಾಗಿರುವುದಾಗಿ ಬರ್ಕೆ ಠಾಣೆಗೆ ನೀಡಿ ದೂರಿನಲ್ಲಿ ತಿಳಿಸಲಾಗಿದೆ.

ಕೈರುನ್ನೀಸಾ (24) ಎಂಬವರು ತನ್ನ 3 ವರ್ಷ ಪ್ರಾಯದ ಝಿಯಾದ್‌ನೊಂದಿಗೆ ನಾಪತ್ತೆಯಾಗಿದ್ದಾರೆ. ಕೈರುನ್ನೀಸಾರಿಗೆ ವಿವಾಹ ವಿಚ್ಛೇದನವಾಗಿದ್ದು, ತನ್ನ ಸಹೋದರನ ಮನೆಯಲ್ಲಿ ವಾಸಿಸುತ್ತಿದ್ದರು. ಮೇ 8ರಂದು ತಾಯಿ ಮನೆಗೆ ಹೋಗುವುದಾಗಿ ತಿಳಿಸಿ ಹೋದವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

5.2 ಅಡಿ ಎತ್ತರ, ಕಪ್ಪು ಬಣ್ಣದ ಹೂಗಳಿರುವ ಬಿಳಿ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ಸ್ಕಾರ್ಪ್, ಕಪ್ಪು ಬಣ್ಣದ ಬುರ್ಖಾ ಧರಿಸಿದ್ದರು. ಗೋಧಿ ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿ ದ್ದಾರೆ. ಕನ್ನಡ, ತುಳು, ಬ್ಯಾರಿ ಭಾಷೆ ಮಾತನಾಡುತ್ತಾರೆ. ಮಾಹಿತಿ ದೊರೆತವರು ಬರ್ಕೆ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದು (0824-2220522)ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು