ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಗಾಂಜಾ ಹಾಗೂ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಮೂರು ಮಂದಿಯನ್ನ ಬಂಧಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ.
ಬಂಧಿತರನ್ನ ಕೈಕಂಬ ಗುರುಪುರದ ಮಹಮ್ಮದ್ ಶಾಕೀರ್, ಪಂಜಿಮೊಗರುವಿನ ನದೀಮ್ ಹಾಗೂ ಕಾವೂರಿನ ಫಕ್ರುದ್ದೀನ್ ಎಂದು ಗುರುತಿಸಲಾಗಿದೆ. ಈ ಮೂವರು ಮಂಗಳೂರಿನ ಕುಂಟಿಕಾನ ಸನ್ ರಾಯಲ್ ರೆಸಿಡೆನ್ಸಿ ಎದುರು ಗಾಂಜಾ ಎಂ.ಡಿ.ಎಂ.ಎ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದರು.
ಈ ಕುರಿತಾದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಹಾಗೂ ಉರ್ವ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಇವ್ರನ್ನ ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 7 ಗ್ರಾಂ ಗಾಂಜಾ, 20 ಗ್ರಾಂ ತೂಕದ ಎಂ.ಡಿ.ಎಂ.ಎ ಎಂಬ ಮಾದಕ ವಸ್ತು, ಮೂರು ಮೊಬೈಲ್ ಮತ್ತು 74,025 ನಗದನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,20,275 ರೂಪಾಯಿ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಕೂಡಾ ಹಾಜರುಪಡಿಸಲಾಗಿದೆ.