Monday, January 20, 2025
ಸುದ್ದಿ

ಪುಟ್ಟ ಮಗುವಿನ ಮೇಲೆರಗಿದ ಗುಮಾಸ್ತ, ಕಂದನ ಪಾಲಿಗೆ ಕರಾಳ ನೆನಪಾದ ಶಾಲೆ! – ಕಹಳೆ ನ್ಯೂಸ್

ಇತತೀಚಿನ ದಿನಗಳಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಮತ್ತೊಮ್ಮೆ ದೆಹಲಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿರುವ ಘಟನೆ ವರದಿಯಾಗಿದೆ. ಹೌದು.. ಪುಟ್ಟ ಬಾಲಕಿಯ ಮೇಲೆ ನಡೆದ ಈ ಕೃತ್ಯದಿಂದ ಪೋಷಕರು ಭಯಭೀತಿಗೊಳ್ಳುವಂತಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

4ನೇ ತರಗತಿಯಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆತಂಕಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಲೆಯಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೇ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಾಗಿದ್ದು, ಈತನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 43 ವರ್ಷದ ಕಾಮುಕನನ್ನು ಪೊಲೀಸರು ಬಂಧಿಸಿದ್ದು, ದಕ್ಷಿಣ ರೋಹಿಣಿ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ದೂರು ದಾಖಲಾಗಿದೆ.

ಬಾಲಕಿ ಶಾಲೆಯಲ್ಲಿ ಆಟ ಆಡುತ್ತಿದ್ದ ಸಮಯದಲ್ಲಿ ಆಕೆಯನ್ನು ಪುಸಲಾಯಿಸಿ ಕರೆದ ಆರೋಪಿಯು ಶಾಲೆಯಲ್ಲಿಯೇ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ತಿಳಿದು ಬಂದಿದೆ.