Tuesday, January 21, 2025
ಸುದ್ದಿ

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

 

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಸಿ.ಟಿ ರವಿ ತಡರಾತ್ರಿ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅವರಿಗೆ ಇತ್ತೀಚೆಗೆ ಕಿಡ್ನಿ ಸಮಸ್ಯೆ ಎದುರಾಗಿದ್ದು, ಶಸ್ತ್ರಕ್ರಿಯೆ ಕೂಡಾ ನಡೆದಿತ್ತು. ಇದೀಗ ಆರೋಗ್ಯದಲ್ಲಿ ದಿಢೀರ್ ವ್ಯತ್ಯಾಸವಾಗಿದ್ದರಿಂದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ವಿಧಾನಸಭಾ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದ ಸಿ.ಟಿ ರವಿ, ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ನಿನ್ನೆ ಕುಟುಂಬ ಸಮೇತ ಚಿಕ್ಕಮಗಳೂರಿನಲ್ಲಿ ಮತದಾನ ಮಾಡಿದ್ದರು.