ಮಂಗಳೂರು: ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ವತಿಯಿಂದ ಸುರತ್ಕಲ್ ಅಕ್ರಮ ಟೋಲ್‌ಗೇಟ್ ಮುಚ್ಚಿಹಾಕಲು ಒತ್ತಾಯಿಸಿ, ರಾಷ್ಟ್ರೀಯ ಹೆದ್ದಾರಿ ಗುಂಡಿ ಮುಚ್ಚಲು ಸರ್ವಿಸ್ ರಸ್ತೆಗಳ ನಿರ್ಮಾಣಕ್ಕೆ ಆಗ್ರಹಿಸಿ ಕೂಳೂರು ಜಂಕ್ಷನ್‌ನಿಂದ ಸುರತ್ಕಲ್ ಟೋಲ್‌ಗೇಟ್‌ವರೆಗೆ ಬೃಹತ್ ಪಾದಯಾತ್ರೆ ನಡೆಯಿತು.
ಈ ಸಂದರ್ಬದಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ , ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ , ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.