ಚಾರ್ಮಾಡಿ ಘಾಟ್‌ನ 6ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ಇಂದು ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ನಡೆದಿದೆ.
ಈ ವೇಳೆ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎದುರಾಯಿತು.
ಶಿರಾಡಿ ಘಾಟ್‌ನ ಬಂದ್ ಹಿನ್ನೆಲೆ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗ ಚಾರ್ಮಾಡಿ ಘಾಟ್ ಆಗಿದ್ದು, ಲಾರಿಯನ್ನು ತೆರವುಗೊಳಿಸಲು ಪೊಲೀಸರು ಹಾಗೂ ಸ್ಥಳೀಯರು ಪರದಾಡುವಂತಹ ಸನ್ನಿವೇಶ ಎದುರಾಯಿತು.