ರಾಜ್ಯದ ಅನುದಾನಿತ ಪ್ರೌಢಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಸೌಲಭ್ಯ ಮಂಜೂರು –ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದ ಅನುದಾನಿತ ಪ್ರೌಢಶಾಲಾ ಶಿಕ್ಷಕಿಯರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರು ಮತ್ತು ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಇರುವಂತೆ ಶಿಶುಪಾಲನಾ ರಜೆ ಸೌಲಭ್ಯವನ್ನು ವಿಸ್ತರಿಸಲು ಮನವಿ ಮಾಡಲಾಗಿದೆ.
ಪತ್ರದಲ್ಲಿ ಅನುದಾನಿತ ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರು ಮತ್ತು ನೌಕರರು ಸರ್ಕಾರದ ಅನುದಾನದಿಂದಲೇ ವೇತನ, ಭತ್ಯೆಗಳನ್ನು ಪಡೆಯುತ್ತಿದ್ದಾರೆ. ಅಲ್ಲದೆ ಸರ್ಕಾರಿ ಮಹಿಳಾ ನೌಕರರ ಮತ್ತು ಅನುದಾನಿತ ಪ್ರೌಢಶಾಲಾ ಮಹಿಳಾ ನೌಕರರ ಕರ್ತವ್ಯದ ಸ್ವರೂಪ ಒಂದೇ ರೀತಿಯಾಗಿದ್ದು, ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರು ಮತ್ತು ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಇರುವಂತೆ ಶಿಶುಪಾಲನಾ ರಜೆ ಸೌಲಭ್ಯವನ್ನು ವಿಸ್ತರಿಸುವಂತೆ ಕೋರಲಾಗಿದೆ.
ರಾಜ್ಯ ಸರ್ಕಾರದ ಮಹಿಳಾ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನಾ ರಜೆಯನ್ನು ಘೋಷಿಸಿದ್ದು, ಅದರಂತೆ ಕೆಲವು ಷರತ್ತುಗಳ ಮೇರೆಗೆ ಇಡೀ ಸೇವಾವಧಿಯಲ್ಲಿ ಗರಿಷ್ಟ ಆರು ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನಾ ರಜೆಯನ್ನು ಸಕ್ಷಮ ಪ್ರಾಧಿಕಾರವು ಮಂಜೂರು ಮಾಡತಕ್ಕದೊಂದು ಆದೇಶಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.