Saturday, November 23, 2024
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಎಲ್ಲೋ ಅಲರ್ಟ್‌ ಘೋಷಣೆ –ಕಹಳೆ ನ್ಯೂಸ್

ಕರಾವಳಿ ಭಾಗದ ಹಲವು ಕಡೆಗಳಲ್ಲಿ ಶನಿವಾರ ಮಳೆಯಾದ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬೆಳಗ್ಗಿನಿಂದಲೇ ಉತ್ತಮ ಮಳೆಯಾಗಿದ್ದು ಕೆಲವು ಕಡೆಗಳಲ್ಲಿ ಹಾನಿ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ನಗರದಲ್ಲಿ ಬೆಳಗ್ಗೆ ಸುಮಾರು ಎರಡು ತಾಸುಗಳ ಕಾಲ ನಿರಂತರ ಮಳೆಯಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಮೋಡ ಕವಿದ ವಾತಾವರಣ, ಸಾಧಾರಣ ಮಳೆ ಸುರಿದಿದೆ. ತಗ್ಗು ಪ್ರದೇಶಗಳಲ್ಲಿ, ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆ ಉಂಟಾಯಿತು. ಉಳಿದಂತೆ ಬಂಟ್ವಾಳ, ಬೆಳ್ತಂಗಡಿ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿದಿತ್ತು.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೇ 14ರಂದು ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ ಸುರಿಯಲಿದ್ದು, ಗಾಳಿಯ ವೇಗ, ಸಮುದ್ರದ ಅಬ್ಬರ ಕೂಡ ಇರುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಶನಿವಾರ 30.8 ಡಿ.ಸೆ. ಗರಿಷ್ಠ ಮತ್ತು 24.8 ಡಿ.ಸೆ. ಕನಿಷ್ಠ ತಾಪಾಮಾನ ದಾಖಲಾಗಿತ್ತು.