Sunday, January 19, 2025
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರಿನಲ್ಲಿ ಮುಗಿಲುಮುಟ್ಟಿದ ಕಾರ್ಯಕರ್ತರ ಆಕ್ರೋಶ ; ತಮ್ಮ ಸ್ವಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ‌ ಡಿ.ವಿ. ಸದಾನಂದ ಗೌಡರ ಶ್ರದ್ಧಾಂಜಲಿ ಬ್ಯಾನರ್ ಹಾಗಿ ಚಪ್ಪಲಿ ಹಾರ – ಕಹಳೆ ‌ನ್ಯೂಸ್

ಪುತ್ತೂರು : ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು., ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.

ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ., ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.ಅಷ್ಟೇ ಅಲ್ಲದೇ ಈ ಬ್ಯಾನರ್ ಗೆ ಚಪ್ಪಲಿ ಹಾರವನ್ನು ಹಾಕಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು