Monday, January 20, 2025
ಸುದ್ದಿ

ಗೆದ್ದು ಸೋತ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಕೋರ್ಟ್ ಮೆಟ್ಟಿಲೇರಲು ನಿರ್ಧಾರ –ಕಹಳೆ ನ್ಯೂಸ್

ಮತ ಎಣಿಕೆಯಲ್ಲಿ ಗೊಂದಲ ಉಂಟಾಗಿ 16 ಮತಗಳ ಅಂತರದಿAದ ಸೋತ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪ್ರಜಾಪ್ರಭುತ್ವದ ಕಗ್ಗೊಲೆ ವಿರುದ್ಧ ಹೋರಾಡಲು ಮಾಡಲು ಮುಮದಾಗಿದ್ದು, ಈ ಮೂಲಕ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನಿಂದಲೂ ಮತ ಎಣಿಕೆ ಹಾವು-ಏಣಿಯಾಟ ನಡೆಯುತ್ತಲೇ ಇತ್ತು. 16 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದ ಬಳಿಕ ಕಾಂಗ್ರೆಸ್‌ನ ಸೌಮ್ಯಾರೆಡ್ಡಿ ಅವರು 294 ಮತಗಳಿಂದ ಮುನ್ನಡೆ ಸಾಧಿಸಿರುವುದನ್ನು ಚುನಾವಣಾ ಫಲಿತಾಂಶದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಯಿತು. ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರು ಅಂಚೆ ಮತಗಳ ಮರು ಎಣಿಕೆಗೆ ಒತ್ತಾಯಿಸಿದರು. ಹೀಗಾಗಿ ತಡರಾತ್ರಿಯವರೆಗೂ ಒಟ್ಟು ಮೂರು ಬಾರಿ ಮರು ಎಣಿಕೆ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇತ್ತ ಮೊದಲ ಹಾಗೂ ಎರಡನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಯವರು ಮುನ್ನಡೆಯನ್ನ ಸಾಧಿಸಿದ್ದರು. ಇನ್ನೂ ಕೊನೆಯದಾಗಿ ಮರು ಎಣಿಕೆಯಲ್ಲಿ ಮೊದಲಿಗೆ ತಿರಸ್ಕೃತಗೊಳಿಸಿದ್ದ 200 ಅಂಚೆ ಮತಗಳನ್ನು ಸಿಂಧುಗೊಳಿಸಿದ್ದರಿAದ ಬಿಜೆಪಿ ಅಭ್ಯರ್ಥಿ 16 ಮತಗಳ ಮುನ್ನಡೆಯನ್ನ ಸಾಧಿಸಿದರು. ಈ ವೇಳೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಗಳು ಫಲಿತಾಂಶವನ್ನ ಪ್ರಕಟಿಸಲಿಲ್ಲ.

ಇನ್ನೂ ಜಿಲ್ಲಾ ಚುನಾವಣಾಧಿಕಾರಿಯೂ ತುಷಾರ್ ಗಿರಿನಾಥ್ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ, ಇವಿಎಂ ಮತ್ತು ಅಂಚೆ ಮತಗಳನ್ನು ಪರಿಶೀಲಿಸಿ, ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರು 16 ಮತಗಳಿಂದ ಜಯ ಗಳಿಸಿದ್ದಾರೆಂದು ಘೋಷಿಸಿದರು.

ಈ ಮೂಲಕ ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಗೊಂದಲಕ್ಕೆ ಚುನಾವಣಾಧಿಕಾರಿಗಳು ಶನಿವಾರ ಮಧ್ಯರಾತ್ರಿ ತೆರೆ ಎಳೆದಿದ್ದು, ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರು ಗೆಲುವು ಸಾಧಿಸಿ, ಗೆದ್ದು ಸೋತ ಸೌಮ್ಯ ರೆಡ್ಡಿ ಬೇಸರಗೊಂಡ ಮತ ಎಣಿಕಾ ಕೇಂದ್ರದಿAದ ಕಣ್ಣೀರು ಹಾಕುತ್ತಾ ಹೊರ ಬಂದಿದ್ದರು.

ಇದೀಗ ಈ ಕುರಿತು ಟ್ವೀಟ್ ಮಾಡಿದ ಸೌಮ್ಯ ರೆಡ್ಡಿ, ವಿಧಾನಸಭೆ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವದಿಸಿದ ಜಯನಗರದ ನನ್ನ ಪ್ರೀತಿಯ ಜನತೆಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ನನ್ನ ಬೆನ್ನೆಲುಬಾಗಿ ನಿಂತ ನಾಯಕರಿಗೆ ಅನಂತ ಧನ್ಯವಾದಗಳು. ಕಷ್ಟದ ಸಂದರ್ಭದಲ್ಲಿ ಒಗ್ಗಟ್ಟು ಪ್ರದರ್ಶಿಸಿ ನನ್ನ ಜೊತೆ ನಿಂತ ಸಾವಿರಾರು ಜನರಿಗೆ ಇದೇ ಸಂದರ್ಭದಲ್ಲಿ ನಮನಗಳನ್ನು ಸಲ್ಲಿಸುತ್ತೇನೆ. ಫಲಿತಾಂಶ ಪ್ರಕಟಣೆ ಸಂದರ್ಭದಲ್ಲಿ ನಡೆದಂತಹ ಮೋಸ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆ ವಿರುದ್ಧ ಹೋರಾಡಲು ನಿಮ್ಮ ಬೆಂಬಲವನ್ನು ನಾನು ಕೈಮುಗಿದು ಕೋರುತ್ತಿದ್ದೇನೆ ಎಂದು ಹೇಳಿದ್ದಾರೆ.