Monday, January 20, 2025
ಸುದ್ದಿ

ರಾಜ್ಯದ ಬಿಜೆಪಿ ನಾಯಕರಿಬ್ಬರಿಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್ ಅಳವಡಿಕೆ : ಪುತ್ತೂರು ಬಿಜೆಪಿ ವತಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು –ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ಮಾಜಿ ಸಚಿವ ಬೆಂಗಳೂರು ಉತ್ತರದ ಹಾಲಿ ಸಂಸದ ಡಿ ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್ ಅಳವಡಿಸಿರುವುದನ್ನು ವಿರೋಧಿಸಿ ಇಂದು ಪುತ್ತೂರು ಬಿಜೆಪಿ ವತಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗೆ ಸೋಲು ಉಂಟಾದ ಹಿನ್ನಲೆಯಲ್ಲಿ, ಈ ಎಲ್ಲಾ ಬೆಳವಣಿಗೆಗೆ ನಳಿನ್ ಕುಮಾರ್ ಕಟೀಲ್ ಮತ್ತು ಡಿ ವಿ ಸದಾನಂದ ಗೌಡ ಅವರೇ ಕಾರಣ ಎಂದು ಆಕ್ರೋಶಗೊಂಡ ಕಾರ್ಯಕರ್ತರು, ಮೇ 14 ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ಮಾಜಿ ಸಚಿವ ಬೆಂಗಳೂರು ಉತ್ತರದ ಹಾಲಿ ಸಂಸದ ಡಿ ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್ ಅಳವಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬ್ಯಾನರ್ ಅಳವಡಿಸಿರುವುದನ್ನು ವಿರೋಧಿಸಿ, ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸುವAತೆ ಆಗ್ರಹಿಸಿ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಸಹಿತ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.