Monday, January 20, 2025
ಸುದ್ದಿ

ವಿಟ್ಲದ ಗ್ಯಾಸ್ ಏಜೆನ್ಸಿ ಸಿಬ್ಬಂದಿ ಮೇಲೆ ಕೋಳಿ ಅಂಗಡಿಯ ಮಾಲಕನಿಂದ ಹಲ್ಲೆ – ಕಹಳೆ ನ್ಯೂಸ್

ವಿಟ್ಲ : ವ್ಯಕ್ತಿಯೋರ್ವರು ತಂಡದೊಂದಿಗೆ ಬಂದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿಟ್ಲದ ಗ್ಯಾಸ್ ಏಜೆನ್ಸಿಯ ಸಿಬ್ಬಂದಿಯೋರ್ವರು ವಿಟ್ಲದ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಸಾಯಿ ಇಂಡಿಯನ್ ಗ್ಯಾಸ್ ಏಜೆನ್ಸಿಯ ಸಿಬ್ಬಂದಿ ಸದಾನಂದ ಆಸ್ಪತ್ರೆಗೆ ದಾಖಲಾದವರಾಗಿದ್ದರೆ. ವಿಟ್ಲದ ಮೇಗಿನಪೇಟೆಯಲ್ಲಿ ಸದಾನಂದರವರು ಕಮರ್ಷಿಯಲ್ ಗ್ಯಾಸ್ ಅನ್ನು ಅಂಗಡಿಗಳಿಗೆ ಕೊಂಡೊಯ್ಯುತ್ತಿದ್ದ ವೇಳೆ ಮೇಗಿನಪೇಟೆಯ ಕೋಳಿ ಅಂಗಡಿಯ ಮಾಲಕನೋರ್ವ ಗ್ಯಾಸ್ ಸಪ್ಲೈ ವಿಚಾರಕ್ಕೆ ಸಂಬಂಧಿಸಿ ಸದಾನಂದರೊಂದಿಗೆ ಮಾತಿಗಿಳಿದು ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿ ತಂಡದೊಂದಿಗೆ ಹಲ್ಲೆ ನಡೆಸಿದ್ದಾರೆ ಎಂದು ಆಸ್ಪತ್ರೆಯಲ್ಲಿ ದಾಖಲಾಗಿರುವ ಸದಾನಂದರವರು ಆರೋಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು