Tuesday, January 21, 2025
ಸುದ್ದಿ

ಕಜಕಿಸ್ತಾನದಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಕರೆ : ಪೊಲೀಸರಿಗೆ ದೂರು –ಕಹಳೆ ನ್ಯೂಸ್

ನಿನ್ನೆ ರಾತ್ರಿ 12 ಗಂಟೆಗೆ ಕಜಕಿಸ್ತಾನದಿಂದ ನನಗೆ ಕರೆ ಬಂದಿದೆ. ಈ ಸಂಬAಧ ಪೊಲೀಸರಿಗೆ ದೂರು ನೀಡಲಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಧ್ಯಮಗಳ ಜೊತೆ ಮಾತನಾಡಿರುವ ಈಶ್ವರಪ್ಪ, ನಾನು ಕಾಲ್ ರಿಸೀವ್ ಮಾಡಿಲ್ಲ. ಸೈಲೆಂಟ್ ಮೋಡ್‌ನಲ್ಲಿಟ್ಟಿದ್ದೆ. ಹಿಂದೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬರನ್ನು ಬಂಧಿಸಿದಾಗ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಮಾಡಿದ್ದರು ಎಂದು ಗೊತ್ತಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆತನನ್ನು ಬಂಧಿಸಿದ ವೇಳೆ ಶಾಹೀರ್ ಶೇಖ್ ಎಂದು ಗೊತ್ತಾಗಿತ್ತು. ಆತನ ಡೈರಿಯಲ್ಲಿ ನನ್ನ ಹೆಸರು ಕೂಡ ಉಲ್ಲೇಖವಾಗಿರೋದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ನನಗೆ ಕರೆ ಬಂದಿರಬಹುದು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ದೇಶ ವಿರೋಧಿ ಚಟುವಟಿಕೆಗಳು ಹೆಚ್ಚಾಗಿದೆ. ಬೆಳಗಾವಿಯ ತಿಲಕವಾಡಿ ಠಾಣೆ ವ್ಯಾಪ್ತಿಯಲ್ಲಿ ನಡೆದ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಯೇ ದೂರು ನೀಡಿದ್ದಾರೆ ಎಂದರು.